Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಯತ್ನ: ಬಿಜೆಪಿ ಕಾರ್ಯಕರ್ತರ ಬಂಧನ

ಬೆಂಗಳೂರಿನ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ ಬಿಜೆಪಿ ಇಂದು ಮಂಡ್ಯದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಮಂಡ್ಯನಗರದಲ್ಲಿ ಪೊಲೀಸರು ಬಂಧಿಸಿದರು.

ಮಂಡ್ಯನಗರದ ಬಂದಿಗೌಡ ಬಡಾವಣೆಯ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು, ಮುಖಂಡರಾದ ಅಶೋಕ್ ಜಯರಾಮ್, ಅರವಿಂದ್, ಅಶೋಕ್ ಕುಮಾರ್, ಕೇಶವ ಸೇರಿದಂತೆ ಮೂವತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಬಿಜೆಪಿ ಕಚೇರಿಯಿಂದ ಮೆರವಣಿಗೆ ಹೊರಟ ಪಕ್ಷದ ಕಾರ್ಯಕರ್ತರು ಬೆಂಗಳೂರು- ಮೈಸೂರು ಹೆದ್ದಾರಿ ಮಾರ್ಗದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯತ್ತ ಹೊರಟಾಗ ರಸ್ತೆಯಲ್ಲಿ ಬ್ಯಾರಿಕೇಟ್ ಗಳನ್ನು ಹಾಕಿ ಪೊಲೀಸರು ತಡೆದರು. ಕೆಲವು ಕಾರ್ಯಕರ್ತರು ಬ್ಯಾರಿಕೇಟ್ ಮೇಲೆ ಹತ್ತಿ ಜಿಗಿಯಲು ಪ್ರಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದರು.

ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ರಾಜ್ಯ ಸರ್ಕಾರ ಕೂಡಲೇ ಬಂಧಿಸಬೇಕು, ರಾಜ್ಯ ಪೊಲೀಸ್‌ ಇಲಾಖೆ, ಗೃಹ ಸಚಿವರು ಆರೋಪಿಗಳನ್ನ ಬಂಧಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಮಂಜುನಾಥ್, ಸಿಂಧು, ಶ್ವೇತಾ ಅಶೋಕ್, ಮಮತಾ ಚಂದನ್,  ತಾಯಮ್ಮ, ಪುಟ್ಟಮ್ಮ, ವರಲಕ್ಷ್ಮಿ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!