Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಇಂದು ಮಳವಳ್ಳಿ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಾರ್ವಜನಿಕರಿಂದ ಕುಂದು ಕೊರತೆ ಕುರಿತು ಅರ್ಜಿಗಳನ್ನು ಸ್ವೀಕರಿಸಿ, ತಾಲ್ಲೂಕು ಕಚೇರಿ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸದೇ ನಿಗದಿತ ಸಮಯದಲ್ಲಿ ಪಾರದರ್ಶಕವಾಗಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದರು.

ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಸಂಬಂಧ ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳು ಹಾಗೂ ಚುನಾವಣಾ ಆಯೋಗ ನೀಡಿರುವ ನಿರ್ದೇಶನದಂತೆ ಸಿದ್ಧತೆಗಳನ್ನು ಮಾಡಿಕೊಂಡಿರುವುದನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಳವಳ್ಳಿ ತಹಶೀಲ್ದಾರ್ ಲೋಕೇಶ್ ಉಪಸ್ಥಿತರಿದ್ದರು‌.

ಶೇಖ್ ತನ್ವಿರ್ ಆಸಿಫ್ ಭೇಟಿ

ಮಂಡ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶೇಖ್ ತನ್ವಿರ್ ಆಸಿಫ್ ಅವರು ಮಂಗಳವಾರದಂದು ಮಳವಳ್ಳಿ ತಾಲ್ಲೂಕು ಪಂಚಾಯತ್ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.

ಮಳವಳ್ಳಿ ತಾಲ್ಲೂಕು ವ್ಯಾಪ್ತಿಯ ಗ್ರಾಮಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಚರ್ಚಿಸಿ, ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಮಳವಳ್ಳಿ ತಾಲ್ಲೂಕು ಬೆಳಕವಾಡಿ ಮತ್ತು ಇತರೆ 04 ಗ್ರಾಮಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಯು ಪ್ರಗತಿಯಲ್ಲಿದ್ದು, ಕಾಮಗಾರಿಯ ಸ್ಥಳವನ್ನು ಪರಿಶೀಲಿಸಿದರು. ಸದರಿ ಯೋಜನೆಗೆ ಸಂಬಂಧಪಟ್ಟಂತೆ ಜಾಕ್ವೆಲ್ ನಲ್ಲಿರುವ ಮೋಟಾರ್ ಗಳು ಚಾಲನೆಯಲ್ಲಿದ್ದು, WTP ಏರಿಯಟರ್, ಪಿಲ್ಟರ್ ಮೀಡಿಯಾ ಮತ್ತು ಪಂಪು ಮೋಟಾರ್ ಗಳನ್ನು ಪರಿವೀಕ್ಷಣೆ ನಡೆಸಿ ಕಾಮಗಾರಿಯನ್ನು ಅತೀ ಜರೂರಾಗಿ ಪೂರ್ಣಗೊಳಿಸುವಂತೆ ಸ್ಥಳದಲ್ಲಿ ಹಾಜರಿದ್ದ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರವರಿಗೆ ಸೂಚಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!