Friday, November 20, 2026

ಪ್ರಾಯೋಗಿಕ ಆವೃತ್ತಿ

ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ವಿಶೇಷ ಪೂಜೆ

ವರದಿ: ಪ್ರಭು ವಿ ಎಸ್

ಮದ್ದೂರು ಪಟ್ಟಣದ ಹಳೆ ಬಸ್ ನಿಲ್ದಾಣದ ಬಳಿಯಿರುವ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ದೇವಸ್ಥಾನದಲ್ಲಿ ಶಂಕರ ಸಭಾದ ವತಿಯಿಂದ ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ಶುಕ್ರವಾರ ಮತ್ತು ಶನಿವಾರ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇಗುಲದ ಪ್ರಧಾನ ಅರ್ಚಕ ಪುರೋಹಿತರಾದ ರಾಘವೇಂದ್ರ ರಾವ್ ತಿಳಿಸಿದರು.

ಶುಕ್ರವಾರ ಬೆಳಗ್ಗೆ 9 ಗಂಟೆಗೆ ರುದ್ರ ಹೋಮ, 10 ಗಂಟೆಗೆ ಕಾಶಿ ವಿಶ್ವನಾಥನಿಗೆ ಮಹಾರುದ್ರಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಕಾಶಿವಿಶ್ವನಾಥನಿಗೆ ವಿಶೇಷ ಅಲಂಕಾರದೊಂದಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಮಾಡಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 8 ವರೆಗೂ ದೇವಾಲಯ ತೆರೆದಿರುತ್ತದೆ . ಕಾಶಿ ವಿಶ್ವನಾಥನಿಗೆ ಮೂರು ಜಾವಾಭಿಷೇಕಾ ಹಾಗೂ ಮೂರು ವಿಶೇಷ ಅಲಂಕಾರ ಮಾಡುವ ವಿಶೇಷ  ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಶಿವರಾತ್ರಿ ಜಾಗರಣೆಯ ಅಂಗವಾಗಿ ರಾತ್ರಿ ಪೂರ್ಣ ದೇವಸ್ಥಾನದಲ್ಲಿ ಶ್ರುತಿ ಸಾಗರ ಭಜನಾ ಮಂಡಳಿ ವತಿಯಿಂದ ವಿವಿಧ ಕಾರ್ಯಕ್ರಮಗಳು ಏರ್ಪಡಿಸಲಾಗಿದೆ ಹಾಗೂ ಸಂಗೀತ, ನೃತ್ಯ ಕಾರ್ಯಕ್ರಮಗಳು ಇರುತ್ತವೆ. ಶನಿವಾರ ಬೆಳಗ್ಗೆ 6 ಗಂಟೆಗೆ ಶಿವ ಪಾರ್ವತಿ ಉತ್ಸವ ಕೋಟೆ ಬೀದಿಯಲ್ಲಿ ನೆರವೇರುತ್ತದೆ. ತದನಂತರ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ಮಾಡಲಾಗುತ್ತದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪಗೆ ಒಳಾಗುವಂತೆ ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶಂಕರ ಸಭಾ ಅಧ್ಯಕ್ಷ ಗುರುಸ್ವಾಮಿ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ