Friday, September 20, 2024

ಪ್ರಾಯೋಗಿಕ ಆವೃತ್ತಿ

ಪಂಚ ಗ್ಯಾರಂಟಿ ಫಲಾನುಭವಿಗಳ ಸಮಾವೇಶ| ನಾಳೆ ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಆಗಮನ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 10 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಅವರು ಬೆಳಿಗ್ಗೆ 11.35 ಗಂಟೆಗೆ ಮಂಡ್ಯ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜಿನ ಪಿ.ಇ.ಟಿ ಕ್ರೀಡಾಂಗಣದ ಹೆಲಿಪ್ಯಾಡ್ ಗೆ ಹ್ಯಾಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ.

ಮಂಡ್ಯನಗರದ ಮಂಡ್ಯ ವಿಶ್ವವಿದ್ಯಾನಿಲಯ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿರುವ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅವರೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್,  ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಸರ್ಕಾರದ ಹಲವು ಸಚಿವರು ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಮಂಡ್ಯ ಶಾಸಕ ಪಿ.ರವಿಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸುವರು.

ಇದಕ್ಕಾಗಿ ಮಂಡ್ಯ ಜಿಲ್ಲಾಡಳಿತವು ಸಕಲ ಸಿದ್ದರೆ ಕೈಗೊಂಡಿದ್ದು, ಮಂಡ್ಯ ಜಿಲ್ಲೆ ಎಲ್ಲಾ ತಾಲ್ಲೂಕುಗಳಿಂದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಅಂದಾಜಿನ ಪ್ರಕಾರ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ ಎಂದು ತಿಳಿದು ಬಂದಿದೆ.

ಮಧ್ಯಾಹ್ನ 3.15 ಗಂಟೆಗೆ ಮಂಡ್ಯ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜಿನ ಪಿ.ಇ.ಟಿ ಕ್ರೀಡಾಂಗಣದಲ್ಲಿ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಪರ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!