Friday, November 20, 2026

ಪ್ರಾಯೋಗಿಕ ಆವೃತ್ತಿ

ನೂರಾರು ಕೋಟಿ ಅನುದಾನ ತಂದು ವಿರೋಧಿಗಳಿಗೆ ಉತ್ತರ: ನರೇಂದ್ರಸ್ವಾಮಿ

ಕೆಲವರು ಗ್ಯಾರಂಟಿ ಯೋಜನೆಗಳಿಗೆ ಹಣಕೊಟ್ಟು ಅಭಿವೃದ್ದಿಪಡಿಸಲು ಹಣ ಇಲ್ಲ ಎಂದು ಹೇಳುವವರಿಗೆ ನೂರಾರು ಕೋಟಿ ಅನುದಾನವನ್ನು ತಂದು ವಿರೋಧಿಗಳಿಗೆ ಅಭಿವೃದ್ಧಿಯಲ್ಲಿ ಉತ್ತರ ನೀಡಿದ್ದೇನೆ ಎಂದು ಶಾಸಕ ಪಿಎಂ ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ 183 ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಗುದ್ದಲಿ ಪೂಜೆ ನೆರೆವೇರಿಸಿ ಮಾತನಾಡಿದ ಅವರು ಕೆಲವರು ಗ್ಯಾರಂಟಿ ಯೋಜನೆಗಳಿಗೆ ಹಣಕೊಟ್ಟು ಅಭಿವೃದ್ದಿ ಪಡಿಸಲು ಹಣ ಇಲ್ಲ ಎಂದು ಹೇಳುತ್ತಿದ್ದರು. ನೂರಾರು ಕೋಟಿ ಅನುದಾನವನ್ನು ತಂದು ವಿರೋಧಿಗಳ ಬಾಯಿ ಮುಚ್ಚಿಸಲಾಗುತ್ತಿದೆ. ಆದರೂ ಇಂದಿಗೂ ಅಪಪ್ರಚಾರ ಮಾಡುವುದನ್ನು ನಿಲ್ಲಿಸಿಲ್ಲ, ಮನೆಯಲ್ಲಿ ಕುಳಿತಿರುವವರು ಯಾವ ರೀತಿ ಅಭಿವೃದ್ದಿ ಪಡಿಸುತ್ತಿದ್ದಾರೆಂದು ಕುಳಿತು ನೋಡಿಕೊಳ್ಳಲಿ ಎಂದರು.

ನೀರಾವರಿ,ಕೃಷಿ, ಶಿಕ್ಷಣ,ಉದ್ಯೋಗ ಸೇರಿದಂತೆ ಎಲ್ಲಾ ಕ್ಷೇತ್ರ ಗಳಿಗೂ ಹೆಚ್ಚು ಒತ್ತು ನೀಡಿ ಸವ೯ಂಗೀಣ ಅಭಿವೃದ್ದಿಗೆ ಶ್ರಮಿಸಲಾಗುತ್ತಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸಹಕಾರದಿಂದ ಕ್ಷೇತ್ರ ವನ್ನು ಮಾದರಿಯಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ವಿಶ್ವಾಸ್,ಸುಜಾತ ಕೆ.ಎಂ ಪುಟ್ಟು, ಚಂದ್ರಕುಮಾರ್, ತಾ.ಪಂ ಮಾಜಿ ಉಪಾಧ್ಯಕ್ಷ ಸಿ.ಮಾಧು, ಸಿದ್ದೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಕುಣಿ ದೇವರಾಜು, ವಕೀಲ ಜಗದೀಶ್, ಎಪಿಎಂಸಿ ಮಾಜಿ ಅಧ್ಯಕ್ಷ ಅಂಬರೀಶ್, ಕೆಪಿಸಿಸಿ ಸದಸ್ಯ ಪುಟ್ಟಸ್ವಾಮಿ, ಮುಖಂಡರಾದ ವೇದಮೂತಿ೯, ಮಹದೇವ್, ದೀಪು, ಮೂತಿ೯,ಬಂಕ್ ಮಹದೇವು, ಯುವ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಕೃಷ್ಣಮೂತಿ೯ ಸೇರಿದಂತೆ ಇತರರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ