Friday, November 20, 2026

ಪ್ರಾಯೋಗಿಕ ಆವೃತ್ತಿ

ಅನಂತಕುಮಾರ ಹೆಗಡೆ ಎಂಬ ಕೀಚಕನನ್ನು ಬಿಜೆಪಿ ಪಕ್ಷದಿಂದ ಕಿತ್ತು ಹಾಕಿ ಕ್ಷಮೆಯಾಚಿಸಲಿ: ಕಾಂಗ್ರೆಸ್

ಸಂವಿಧಾನವನ್ನು ಬದಲಿಸುತ್ತೇವೆ, ಸಂವಿಧಾನವನ್ನು ತಿದ್ದುಪಡಿ ಮಾಡುತ್ತೇವೆ ಎನ್ನುತ್ತಿರುವ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಎಂಬ ಕೀಚಕನನ್ನು ಬಿಜೆಪಿಯು ಪಕ್ಷದಿಂದ ಕಿತ್ತುಹಾಕಿ, ಆತನ ಪರವಾಗಿ ಕ್ಷಮೆ ಯಾಚಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

ಬಿಜೆಪಿ ಸಂವಿಧಾನದ ಯಾವ ಭಾಗ, ಯಾವ ಅಂಶ, ಯಾವ ಅನುಚ್ಚೇದ, ಯಾವ ಕಲಂ ಬಗ್ಗೆ ಅಸಹನೆ ಹೊಂದಿದೆ ಎಂದು ಹೇಳಬೇಕು? ಸಂವಿಧಾನದಲ್ಲಿರುವ ಸ್ವತಂತ್ರದ ಹಕ್ಕಿನ ಬಗ್ಗೆ ಆಕ್ಷೇಪಣೆಯೇ? ಸಮತೆ, ಸಮಾನತೆ ಬೇಡವಾಗಿದೆಯೇ? ಶೋಷಣೆಯ ವಿರುದ್ಧದ ಹಕ್ಕು ಇರಬಾರದೇ? ಎಂಬುದನ್ನು ತಿಳಿಸಬೇಕು. ಧಾರ್ಮಿಕ ಸ್ವತಂತ್ರದ ಹಕ್ಕು ಇರಬಾರದೇ? ವಾಕ್ ಹಾಗೂ ಅಭಿವ್ಯಕ್ತಿ ಸ್ವತಂತ್ರ ಬೇಡವೇ? ಶಿಕ್ಷಣದ ಹಕ್ಕು ಅಪರಾಧವೇ? ಯಾವ ಕಾರಣಕ್ಕಾಗಿ ಸಂವಿಧಾನವನ್ನು ತಿದ್ದಬೇಕು ಎಂಬುದನ್ನು ಬಿಜೆಪಿ ಹೇಳಬೇಕು, ಇಲ್ಲವೇ ಅನಂತಕುಮಾರ ಹೆಗಡೆ ಎಂಬ ಕೀಚಕನನ್ನು ಬಿಜೆಪಿಯು ಪಕ್ಷದಿಂದ ಕಿತ್ತುಹಾಕಿ, ಆತನ ಪರವಾಗಿ ಕ್ಷಮೆ ಯಾಚಿಸಬೇಕೆಂದು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಆಗ್ರಹಿಸಿದೆ.

ಸಂವಿಧಾನ ಬದಲಿಸಲು 400 ಸ್ಥಾನಗಳು ಬೇಕು ಎಂಬ ಬಿಜೆಪಿ ಸಂಸದರ ಹೇಳಿಕೆ ನರೇಂದ್ರ ಮೋದಿ ಮತ್ತು ಅವರ ‘ಸಂಘ ಪರಿವಾರ’ದ ಗುಪ್ತ ಉದ್ದೇಶಗಳ ಬಹಿರಂಗ ಘೋಷಣೆಯಾಗಿದೆ. ಬಾಬಾ ಸಾಹೇಬರ ಸಂವಿಧಾನವನ್ನು ನಾಶ ಮಾಡುವುದೇ ನರೇಂದ್ರ ಮೋದಿ ಮತ್ತು ಬಿಜೆಪಿಯ ಅಂತಿಮ ಗುರಿಯಾಗಿದೆ. ಅವರು ನ್ಯಾಯ, ಸಮಾನತೆ, ನಾಗರಿಕ ಹಕ್ಕುಗಳು ಮತ್ತು ಪ್ರಜಾಪ್ರಭುತ್ವವನ್ನು ದ್ವೇಷಿಸುತ್ತಾರೆ ಎಂದು ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್‌ದ ಕಿಡಿಕಾರಿದೆ.

“>

ಸಮಾಜವನ್ನು ವಿಭಜಿಸುವ ಮೂಲಕ, ಮಾಧ್ಯಮವನ್ನು ಗುಲಾಮರನ್ನಾಗಿ ಮಾಡುವ ಮೂಲಕ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಪಾಡುವ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಲಗೊಳಿಸುವ ಮೂಲಕ, ವಿರೋಧವನ್ನು ತೊಡೆದುಹಾಕಲು ಸಂಚು ರೂಪಿಸುವ ಮೂಲಕ ಭಾರತದ ಮಹಾನ್ ಪ್ರಜಾಪ್ರಭುತ್ವವನ್ನು ಸಂಕುಚಿತ ಸರ್ವಾಧಿಕಾರವಾಗಿ ಪರಿವರ್ತಿಸಲು ಹೊರಟಿದ್ದಾರೆ. ಸ್ವಾತಂತ್ರ್ಯ ಸೇನಾನಿಗಳ ಕನಸುಗಳ ಜೊತೆಗಿನ ಈ ಷಡ್ಯಂತ್ರಗಳನ್ನು ನಾವು ಯಶಸ್ವಿಯಾಗಲು ಬಿಡುವುದಿಲ್ಲ ಮತ್ತು ನಮ್ಮ ಕೊನೆಯ ಉಸಿರು ಇರುವವರೆಗೂ ಸಂವಿಧಾನದ ಆಶಯಗಳು ಹಾಗು ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಕಾಂಗ್ರೆಸ್ ಸವಾಲು ಹಾಕಿದೆ.

 

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ