ವರದಿ : ಪ್ರಭು ವಿಎಸ್
ಮದ್ದೂರು ತಾಲೂಕಿನ ಕೊಪ್ಪ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪಿ ರುದ್ರೇಶ್ ಅವಿರೋಧವಾಗಿ ಆಯ್ಕೆಯಾಗಿದರು.
ಹಿಂದಿನ ಅಧ್ಯಕ್ಷ ನವೀನ್ ಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಿಗದಿಯಾಗಿದ್ದ ಚುನಾವಣೆ ವೇಳೆ ಪಿ ರುದ್ರೇಶ್ ರವರನ್ನು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ತಾ.ಪಂ ಇ.ಒ ಮಂಜುನಾಥ್ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪಿ ರುದ್ರೇಶ್ ಅವರನ್ನು ಸದಸ್ಯರು ಹಾಗೂ ಸ್ಥಳೀಯ ಮುಖಂಡರು ಅಭಿನಂದಿಸಿ ಗೌರವಿಸಿದರು. ರುದ್ರೇಶ್ ಬೆಂಬಲಿಗರು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರಲ್ಲದೆ ಸಚಿವ ಎನ್ ಚಲುವರಾಯಸ್ವಾಮಿ ಪರ ಘೋಷಣೆಗಳನ್ನು ಕೂಗಿ ವಿಜಯೋತ್ಸವ ಆಚರಿಸಿದರು.
ನೂತನ ಅಧ್ಯಕ್ಷ ಪಿ ರುದ್ರೇಶ್ ತಮ್ಮನ್ನು ಅಧ್ಯಕ್ಷರನ್ನಾಗಿಸಲು ಶ್ರಮಿಸಿದ ಸ್ಥಳೀಯ ಮುಖಂಡರುಗಳಿಗೆ ಸದಸ್ಯರುಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರಲ್ಲದೆ ಮುಂದಿನ ದಿನಗಳಲ್ಲಿ ಸಚಿವ ಎನ್ ಚಲುವರಾಯಸ್ವಾಮಿ ಮಾರ್ಗದರ್ಶನದಲ್ಲಿ ಗ್ರಾಮದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮಾದರಿ ಗ್ರಾಮ ಪಂಚಾಯಿತಿ ಯನ್ನಾಗಿಸುವುದಾಗಿ ಹೇಳಿದರು.
ಈ ವೇಳೆ ಉಪಾಧ್ಯಕ್ಷ ಮಮತಾ, ಸದಸ್ಯರಾದ ಕುಮಾರ್ ಕೊಪ್ಪ, ಸುರೇಶ್, ಜೋಗಿ ಗೌಡ, ಸಂತೋಷ್ ಕೊಟ್ಟಿಗೆ, ಪರ್ವೀಜ್, ಗಿರೀಶ್, ಸಾವಿತ್ರಿ, ಜ್ಯೋತಿ ,ಜಯಶೀಲ, ಕವಿತಾ ,ಹರ್ಷದ್, ಮುಖಂಡರಾದ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ್, ಕ್ರಾಂತಿ ಸಿಂಹ, ಜೈ ಲಕ್ಷ್ಮಮ್ಮ, ಶ್ರೀನಿವಾಸ್, ಬೋರಲಿಂಗ, ಕೃಷ್ಣೆಗೌಡ, ಶಿವಣ್ಣ, ಕೆ ರಮೇಶ್, ಕರೀಗೌಡ,ಇತರರಿದ್ದರು




