Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಶಾಸಕರ ಬೆಂಬಲಿಗರಿಂದ ಬೆದರಿಕೆ ಆರೋಪ: ದೂರು

ಮಂಡ್ಯ ತಾಲ್ಲೂಕಿನ ಕೆರಗೋಡು ಧ್ವಜ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಶಾಸಕ ರವಿಕುಮಾರ್ ಬೆಂಬಲಿಗರು ತನಗೆ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಗ್ರಾ.ಪಂ.ಸದಸ್ಯ ಎಂ.ಎಸ್.ರಾಜೇಶ್ ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಕಳೆದ ಮಾ.8ರಂದು ರಾತ್ರಿ 10.30ರ ಸುಮಾರಿಗೆ ಕೆರಗೋಡು ಗ್ರಾಮದ ಬಸ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ಅಲ್ಲಿಗೆ ಆಗಮಿಸಿದ ತಾಳಮೆಳೆದೊಡ್ಡಿಯ ರಾಜೇಶ್, ಕಲ್ಮಂಟಿದೊಡ್ಡಿಯ ಲೋಕೇಶ್ ಹನುಮ ಧ್ವಜ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಅವರು ದೂರಿದ್ದಾರೆ.

ಈ ಸಂಬಂಧ ಹಿತೈಷಿಗಳು ಹಾಗೂ ಕುಟುಂಬದವರೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮವಾಗಿ ದೂರು ಸಲ್ಲಿಸುತ್ತಿದ್ದೇನೆ, ಕಳೆದ ಮಾ.10ರಂದು ಕೆರಗೋಡು ಠಾಣೆಗೆ ದೂರು ಕೊಟ್ಟರೂ ಎಫ್‌ಐಆರ್ ದಾಖಲು ಮಾಡದೇ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ. ಆದ್ದರಿಂದ ಎಸ್ಪಿ ಕಚೇರಿ ದೂರು ನೀಡಲಾಗಿದ್ದು, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.  ಈ ಸಂದರ್ಭದಲ್ಲಿ ಯೋಗೇಶ್, ಬಾಲು, ವಿರೂಪಾಕ್ಷ ಪುನೀತ್ ಮೋಹನ್‌ಕುಮಾರ್ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ