Friday, November 20, 2026

ಪ್ರಾಯೋಗಿಕ ಆವೃತ್ತಿ

ವಿಜೃಂಭಣೆಯಿಂದ ನಡೆದ ವೈರಮುಡಿ ಬ್ರಹ್ಮೋತ್ಸವ

ಸಹಸ್ರಾರು ಭಕ್ತರ ಉದ್ಘೋಷದ ನಡುವೆ ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ವಿಜೃಂಭಣೆಯಿಂದ ನಡೆಯಿತು.

ಶ್ರೀ ಚೆಲುವನಾರಾಯಣ ಸ್ವಾಮಿಯ ಮಹಾರಥೋತ್ಸವವನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು ಗೋವಿಂದ, ಗೋವಿಂದ ಎಂದು ಭಕ್ತ ಪರವಶರಾದರು.

ಕರ್ನಾಟಕ,ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ
ದೇಶದ ನಾನಾ ಭಾಗಗಳಿಂದ ಸಾಗರೋಪಾದಿಯಲ್ಲಿ ಆಗಮಿಸಿದ್ದ ಭಕ್ತರು ರಥೋತ್ಸವವನ್ನು ಕಣ್ತುಂಬಿಕೊಂಡರು. ಪೂರ್ವ, ಫಲ್ಗುಣಿ ನಕ್ಷತ್ರದಲ್ಲಿ ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ಕಾತರದಿಂದ ಕಾದಿದ್ದ ಭಕ್ತರು ಜಯ ಘೋಷಗಳೊಂದಿಗೆ ರಥವನ್ನು ಎಳೆದು ಭಕ್ತಿಭಾವ ಮೆರೆದರು.

ವಿವಿಧ ಬಗೆಯ ಹೂಗಳಿಂದ ಸಿಂಗಾರಗೊಂಡಿದ್ದ ಚೆಲುವರಾಯಸ್ವಾಮಿ ರಥ ಪ್ರಮುಖ ಆಕರ್ಷಣೆಯಾಗಿತ್ತು. ರಥ ಬೀದಿಯಲ್ಲಿ ಸಾಗುವ ವೇಳೆಯಲ್ಲಿ ನಿರೀಕ್ಷೆಗೂ ಮೀರಿದ ಭಕ್ತರು ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾಗಿತ್ತು. ಭಕ್ತರು ಭಕ್ತಿಗೀತೆಗಳನ್ನು ಪಠಿಸುತ್ತ ಹೆಜ್ಜೆ ಹಾಕಿದರು. ಮೇಲುಕೋಟೆಯ ದೇವಾಲಯದ ರಾಜಬೀದಿಯಲ್ಲಿ ಶ್ರೀ ಚೆಲುವ ನಾರಾಯಣ ಸ್ವಾಮಿಯ ಉತ್ಸವಮೂರ್ತಿ ಹಾಗೂ ಶ್ರೀ ದೇವಿ-ಭೂದೇವಿ ಅಮ್ಮನವರನ್ನು ನೋಡಲು ರಥಬೀದಿಯ ಇಕ್ಕೆಲಗಳಲ್ಲಿ ಹಾಗೂ ಬಹುಮಹಡಿ ಕಟ್ಟಡಗಳನ್ನು ಏರಿ ಜನರು ಕಾದು ನಿಂತಿದ್ದರು.

ವಿವಿಧ ಪೂಜಾ ಕೈಂಕರ್ಯ

ರಥೋತ್ಸವಕ್ಕೆ ಮುನ್ನ ಅಮ್ಮನವರ ಸನ್ನಿದಿಯ ಬಳಿ ಯಾತ್ರಾದಾನ ಕಾರ್ಯಕ್ರಮ ನಡೆದ ನಂತರ ಚೆಲುವನಾರಾಯಣ ಸ್ವಾಮಿ ದೇವಾಲಯದಲ್ಲಿ ಉತ್ಸವ ಮೂರ್ತಿ ಚೆಲುವನಾರಾಯಣ ಸ್ವಾಮಿಗೆ ರಾಜಮುಡಿ ಧಾರಣೆಯೊಂದಿಗೆ ಹಾಗೂ ಶ್ರೀದೇವಿ, ಭೂದೇವಿ ಅಮ್ಮನವರಿಗೆ ಮತ್ತು ರಾಮಾನುಜಾಚಾರ್ಯರಿಗೆ ವಿಶೇಷ ಪುಷ್ಪಗಳಿಂದ ಅಲಂಕರಿಸಲಾಗಿತ್ತು.

ಬಿಗಿ ಬಂದೋಬಸ್ತ್

ಚಲುವ ನಾರಾಯಣ ಸ್ವಾಮಿ ರಥೋತ್ಸವದ ಹಿನ್ನಲೆಯಲ್ಲಿ ಮೇಲುಕೋಟೆಯಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿತ್ತು.ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಮೊದಲಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿತ್ತು.

ಕಾರು ಹಾಗೂ ಬೈಕುಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು. ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ