Thursday, November 19, 2026

ಪ್ರಾಯೋಗಿಕ ಆವೃತ್ತಿ

ಮೇಕೆದಾಟು ಯೋಜನೆ ಕುರಿತು ಸರ್ಕಾರ ನಿಲುವು ಪ್ರಕಟಿಸಲಿ: ರೈತ ಹಿತರಕ್ಷಣಾ ಸಮಿತಿ ಆಗ್ರಹ

ರಾಜ್ಯದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಮಾಡಲು ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷ ತಮಿಳುನಾಡಿನ ಡಿಎಂಕೆ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿದ್ದರೂ ಮೌನವಾಗಿರುವುದು ಖಂಡನೀಯ, ರಾಜ್ಯ ಸರ್ಕಾರವು ಕೂಡಲೇ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಜಿಲ್ಲಾ ರೈತ ಹಿತರಕ್ಷಣ ಸಮಿತಿ ಆಗ್ರಹಿಸಿದೆ.

ಮಂಡ್ಯನಗರದ ಸರ್ ಎಂ ವಿ ಪ್ರತಿಮೆ ಎದುರು ಎಂಟನೇ ಸೋಮವಾರದ ಕಾವೇರಿ ಚಳವಳಿಯಲ್ಲಿ ಮಾತನಾಡಿದ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದ ಜಯರಾಮ್, ಮೇಕೆದಾಟು ಯೋಜನೆ ಬಗ್ಗೆ ತಮಿಳುನಾಡು ತನ್ನ ನಿಲುವು ಘೋಷಿಸಿದೆ, ಆದರೆ ಇಂಡಿಯಾ ಮೈತ್ರಿಕೂಟದ ನೇತೃತ್ವ ವಹಿಸಿರುವ ಕಾಂಗ್ರೆಸ್ ಈ ಬಗ್ಗೆ ತುಟಿ ಬಿಚ್ಚಿಲ್ಲ ಏಕೆ ಎಂದು ಪ್ರಶ್ನಿಸಿದರು.

ಕಾವೇರಿ ನದಿ ನೀರಿನ ವಿಚಾರದಲ್ಲಿ ಕಾನೂನು ಹೋರಾಟದ ಜೊತೆಗೆ ನ್ಯಾಯ ಮಂಡಳಿಯ ತೀರ್ಪಿನಂತೆ ರಾಜ್ಯದ ಪಾಲಿನ ಸಂಪೂರ್ಣ ನೀರನ್ನು ಬಳಕೆ ಮಾಡಿಕೊಳ್ಳಬೇಕು. ನೀರಾವರಿ ಪ್ರದೇಶವನ್ನು 18.8 ಲಕ್ಷ ಎಕರೆಗೆ ವಿಸ್ತರಿಸಬೇಕು. ಆದರೆ ಈ ಬಗ್ಗೆಯೂ ವಿಫಲವಾಗಿರುವ ರಾಜ್ಯ ಸರ್ಕಾರ ಇದೀಗ ಮೇಕೆದಾಟು ವಿಚಾರದಲ್ಲಿಯೂ ನಿರ್ಲಕ್ಷ್ಯ ತೋರಿದೆ ಎಂದು ಕಿಡಿಕಾರಿದರು.

ರೈತಸಂಘದ ಇಂಡುವಾಳು ಚಂದ್ರಶೇಖರ್ ಮಾತನಾಡಿದರು. ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ ಬೋರಯ್ಯ, ಕನ್ನಡ ಸೇನೆ ಮಂಜುನಾಥ್, ಜೈ ಕರ್ನಾಟಕ ಪರಿಷತ್ತಿನ ನಾರಾಯಣ್, ದಸಂಸ ಎಂ ವಿ ಕೃಷ್ಣ, ಮೊತ್ತಳ್ಳಿ ಕೆಂಪೇಗೌಡ, ಕರವೇ ಶಂಕರೇಗೌಡ, ಜವರಯ್ಯ ನೇತೃತ್ವ ವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ