ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಂಡ್ಯನಗರದ ಕಲ್ಲಹಳ್ಳಿ ವಿ.ವಿ.ನಗರದ ನಿವಾಸಿ ಕನ್ನಂಬಾಡಿ ಕುಮಾರ್ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಆದೇಶಿಸಿದ್ದಾರೆ.
ಕನ್ನಂಬಾಡಿ ಕುಮಾರ್ ಅವರನ್ನು ಮಂಡ್ಯ ಜಿಲ್ಲೆ ಗಂಗಾಮತಸ್ಥರ ಬೆಸ್ತರ ಸಮುದಾಯದ ಪರವಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ. ಲಿಂಗಯ್ಯ, ಮಂಡ್ಯ ಜಿಲ್ಲಾಗಂಗಾಪರಮೇಶ್ವರಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಜಿಎಸ್ ಸಿದ್ದಯ್ಯ, ಸಾತನೂರು ಕರಿಯಪ್ಪ, ಶಿವ ಮಾದಯ್ಯ, ಗ್ರಾಮ ಪಂಚಾಯತಿ ಸದಸ್ಯ ಹಾಡ್ಯ ಉಮೇಶ್ ಮತ್ತಿತರರು ಅಭಿನಂದಿಸಿದರು.
ಅಭಿನಂದನೆ ಸ್ವೀಕರಿಸಿದ ಮಾತನಾಡಿದ ಕನ್ನಂಬಾಡಿ ಕುಮಾರ್, ಮಂಡ್ಯ ಜಿಲ್ಲಾ ಗಂಗಾಮತಸ್ಥರ ಸಂಘದ ವತಿಯಿಂದ ನಡೆಯುತ್ತಿರುವ ಜಿಲ್ಲಾ ವಿದ್ಯಾರ್ಥಿ ನಿಲಯಕ್ಕೆ ಹಾಗೂ ಸಮುದಾಯ ಭವನದ ಕಾಮಗಾರಿಗೆ 25 ಸಿಮೆಂಟ್ ಚೀಲಗಳನ್ನು ಕೊಡುಗೆ ನೀಡುವುದಾಗಿ ಭರವಸೆ ನೀಡಿದರು.




