Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ|150ಕ್ಕೂ ಹೆಚ್ಚು ಮಿಮ್ಸ್ ವಿದ್ಯಾರ್ಥಿಗಳಿಂದ ರಕ್ತದಾನ

ಮಂಡ್ಯ ನಗರದ ವೈದ್ಯಕೀಯ ಶಿಕ್ಷಣ ಸಂಸ್ಥೆಯ (ಮಿಮ್ಸ್) ಸಭಾಂಗಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಯ ವತಿಯಿಂದ ಬೃಹತ್ ರಕ್ತದಾನ ಶಿಬಿರವು ಜರುಗಿತು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷೆ ಮೀರಾಶಿವಲಿಂಗಯ್ಯ ಮಾತನಾಡಿ, ರಕ್ತದಾನ ಎಂಬುದು ಈ ಸಮಾಜಕ್ಕೆ ಅತಿ ಅವಶ್ಯಕತೆ ಇರುವ ದಾನವಾಗಿದ್ದು, ರಕ್ತದಾನ ಹೊರತುಪಡಿಸಿ, ಬೇರೆ ಯಾವುದೇ ಬಗೆಯ ಪರ್ಯಾಯ ಮಾರ್ಗವಿಲ್ಲ, ಆದ್ದರಿಂದ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವಂತೆ ಕರೆ ನೀಡಿದರು.

ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಶಿವಕುಮಾರ್ ಮಾತನಾಡಿ, ಇಂದು ನಡೆದ ರಕ್ತದಾನ ಶಿಬಿರದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ರಕ್ತದಾನ ಶಿಬಿರದಲ್ಲಿ ಕಾಲೇಜಿನ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

ಇದೇ ಸಂದರ್ಭದಲ್ಲಿ ಡಾ.ಮಾಲತಿ, ರಕ್ತ ನಿಧಿ ಕೇಂದ್ರದ ಮುಖ್ಯಸ್ಥರಾದ ಡಾ. ಮುರಳಿಧರ ಭಟ್, ಹುಸೇನ್, ರೆಡ್ ಕ್ರಾಸ್ ಸಂಸ್ಥೆಯ ಸದಸ್ಯರುಗಳಾದ ರಂಗಸ್ವಾಮಿ, ಡಾ. ಬಿ.ಎಸ್. ಶಿವಕುಮಾರ್, ಇನ್ನಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!