Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ಲೋಕಸಭಾ ಚುನಾವಣೆಗೆ ಮೊದಲ ನಾಮಪತ್ರ ಸಲ್ಲಿಕೆ

ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಯೋಗೇಶ್ ಎಂಬುವವರು ನಾಮಪತ್ರ ಸಲ್ಲಿಸುವುದರೊಂದಿಗೆ ಗುರುವಾರ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ.

ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ ಅವರು ಯೋಗೀಶ್ ಅವರ ನಾಮಪತ್ರ ಸ್ವೀಕರಿಸಿದರು.

ಇಂದು ಗುರುವಾರ ಮಂಡ್ಯ ಲೋಕಸಭೆಗೆ ಅಧಿಸೂಚನೆ ಪ್ರಕಟಗೊಂಡಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ, ರಜಾ ದಿನ ಹೊರತುಪಡಿಸಿ ಏ.4ರವರೆಗೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.

ಏ.5 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏ.8ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ. ಏ 26ರಂದು ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದ್ದು, ಮತ ಎಣಿಕೆಯು ಜೂನ್ 4 ರಂದು ನಡೆಯಲಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ