Sunday, November 22, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು| ಮೃತ ನೌಕರನ ಕುಟುಂಬಕ್ಕೆ ಪರಿಹಾರ ನೀಡದ ಗ್ರಾ.ಪಂ. ಸಾಮಗ್ರಿಗಳ ಜಪ್ತಿ

ಮೃತ ಗ್ರಾಮ ಪಂಚಾಯಿತಿ ನೌಕರನ ಕುಟುಂಬಕ್ಕೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಮರಳಿಗ ಗ್ರಾಮ ಪಂಚಾಯಿತಿ ಕಚೇರಿಯ ಕಂಪ್ಯೂಟರ್, ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ.

2024 ಜ.20ರಂದು ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯವು ಮರಳಿಗ ಗ್ರಾಮ ಪಂಚಾಯಿತಿ ಕಚೇರಿಯ ಚರಾಸ್ತಿಗಳನ್ನು ಜಪ್ತಿ ಮಾಡಲು ಆದೇಶ ನೀಡಿದ್ದರಿಂದ ನ್ಯಾಯಾಂಗ ಇಲಾಖೆಯ ಸಿಬ್ಬಂದಿ ಕಚೇರಿಯ ಕಂಪ್ಯೂಟರ್, ಪೀಠೋಪಕರಣಗಳನ್ನು ವಶಕ್ಕೆ ಪಡೆದರು. ಕಚೇರಿಗೆ ಎಂದಿನಂತೆ ಬಂದಿದ್ದ ಸಿಬ್ಬಂದಿ ಹಾಗೂ ಸಾರ್ವಜನಿಕರು ಜಪ್ತಿ ವಿಷಯ ಕೇಳಿದ ತಕ್ಷಣ ಕಂಗಾಲಾಗಿ, ಕಚೇರಿಯಿಂದ ಹೊರ ನಡೆದರು.

ಪ್ರಕರಣದ ವಿವರ

2009 ರಲ್ಲಿ ಮರಳಿಗ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಎಂಬುವವರು ಬೀದಿ ದೀಪಗಳ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದರು. ಈ ವಿಚಾರವಾಗಿ ಗ್ರಾಮ ಪಂಚಾಯಿತಿಯಿಂದ ಪರಿಹಾರ ನೀಡುವಂತೆ ಆತನ ಪತ್ನಿ ಸುಜಾತಾ ಮನವಿ ಸಲ್ಲಿಸಿದ್ದರು. ಅದರೆ ಮನವಿಯನ್ನು ಗಣನೆಗೆ ತೆಗೆದುಕೊಳ್ಳದ ಅಂದಿನ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಬೇಜವಾಬ್ದಾರಿತನ ತೋರಿದ್ದರು. ಈ ಸಂಬಂಧ ರವಿ ಅವರ ಕುಟುಂಬದವರು 2009 ರಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ನಿರಂತರ ವಿಚಾರಣೆ ನಡೆದು ಕರ್ನಾಟಕ ಹೈಕೋರ್ಟ್ ಪೀಠವು 2009 ರಿಂದ 2023 ರವರೆಗೆ ಶೇ.15ರ ಹೆಚ್ಚುವರಿ ಬಡ್ಡಿ ಸೇರಿ 11 ಲಕ್ಷದ 46 ಸಾವಿರದ 623 ರೂ ಪರಿಹಾರ ಹಣ ತುಂಬಿಕೊಡುವಂತೆ ಆದೇಶ ಹೊರಡಿಸಿತ್ತು.

ನ್ಯಾಯಾಲಯದ ಆದೇಶದ ಪ್ರಕಾರ ಪರಿಹಾರದ ಪೂರ್ಣ ಹಣವನ್ನು ಮೃತ ರವಿ ಅವರ ಕುಟುಂಬಕ್ಕೆ ನೀಡದೇ, ನ್ಯಾಯಾಲಯದ ಆದೇಶವನ್ನು ಗ್ರಾಪಂ ಪರ ಪಾಲನೆ ಮಾಡದ ಹಿನ್ನಲೆಯಲ್ಲಿ ಜಪ್ತಿ ಪ್ರಕ್ರಿಯೆ ಕೈಗೊಂಡಿದ್ದೇವೆ ಎಂದು ಹಿರಿಯ ವಕೀಲ ಬಿ. ರಾಮಕೃಷ್ಣಗೌಡ, ಸಹಾಯಕ ವಕೀಲ ಸುನೀಲ್ ಕುಮಾರ್ ತಿಳಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ