Thursday, September 19, 2024

ಪ್ರಾಯೋಗಿಕ ಆವೃತ್ತಿ

ದೆಹಲಿಗೆ ರಾಜ್ಯದ ಸ್ಥಾನಮಾನ: ಉಚಿತ ವಿದ್ಯುತ್, ಆರೋಗ್ಯ: ಕೇಜ್ರಿವಾಲ್ ಘೋಷಣೆ

ದೆಹಲಿಗೆ ರಾಜ್ಯತ್ವ, ದೇಶದ ಪ್ರತಿಯೊಬ್ಬರಿಗೂ ಉಚಿತ ಆರೋಗ್ಯ ರಕ್ಷಣೆ ಸೇರಿದಂತೆ ಆರು ಚುನಾವಣಾ ಭರವಸೆಗಳನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಘೋಷಿಸಿದ್ದಾರೆ ಎಂದು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ತಿಳಿಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ರ‍್ಯಾಲಿಯಲ್ಲಿ ಈ ಘೋಷಣೆ ಮಾಡಲಾಗಿದೆ.

“ಲೋಕತಂತ್ರ ಬಚಾವೋ” ಅಥವಾ ‘ಪ್ರಜಾಪ್ರಭುತ್ವ ಉಳಿಸಿ’ ಎಂಬ ರ‍್ಯಾಲಿಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಫಾರೂಕ್ ಅಬ್ದುಲ್ಲಾ ಸೇರಿದಂತೆ ಪ್ರಮುಖ ವಿರೋಧ ಪಕ್ಷದ ನಾಯಕರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಸುನೀತಾ ಕೇಜ್ರಿವಾಲ್ ಅವರು ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ತನ್ನ ಪತಿಯಿಂದ ಪತ್ರವನ್ನು ಓದಿದರು.

ದೆಹಲಿ ಕೇಜ್ರಿವಾಲ್‌ರ ಆರು ಚುನಾವಣಾ ಭರವಸೆಗಳಿವು

1. ದೇಶದಾದ್ಯಂತ 24 ಗಂಟೆ ವಿದ್ಯುತ್
2. ದೇಶದಾದ್ಯಂತ ಬಡವರಿಗೆ ಉಚಿತ ವಿದ್ಯುತ್
3. ಪ್ರತಿ ಗ್ರಾಮದಲ್ಲಿ ಅತ್ಯುತ್ತಮ ಸರ್ಕಾರಿ ಶಾಲೆಗಳನ್ನು ನಿರ್ಮಿಸುವುದು
4. ಪ್ರತಿ ಗ್ರಾಮದಲ್ಲಿ ಕ್ಲಿನಿಕ್‌ಗಳನ್ನು ಸ್ಥಾಪಿಸುವುದು
5. ಸ್ವಾಮಿನಾಥನ್ ಆಯೋಗದ ವರದಿಯಲ್ಲಿ ನೀಡಲಾಗಿರುವ ಬೆಳೆಗಳಿಗೆ ನ್ಯಾಯಯುತ ಬೆಲೆಯನ್ನು ರೈತರಿಗೆ ನೀಡುವುದು
6. ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ ನೀಡುವುದು.

ನನ್ನ ಪ್ರೀತಿಯ ಭಾರತೀಯರೇ, ನಿಮಗೆಲ್ಲರಿಗೂ ನಿಮ್ಮ ಈ ಮಗನ ಶುಭಾಶಯಗಳು. ನಾನು ಮತ ಕೇಳುತ್ತಿಲ್ಲ, ಚುನಾವಣೆಯಲ್ಲಿ ಗೆಲ್ಲಲು ಯಾರನ್ನೂ ಸೋಲಿಸುವ ಬಗ್ಗೆ ಮಾತನಾಡುವುದಿಲ್ಲ. ನಾನು ಭಾರತವನ್ನು ನವ ಭಾರತ ಮಾಡುವ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಜೈಲಿನಲ್ಲಿದ್ದೇನೆ, ಇಲ್ಲಿ ನನಗೆ ಯೋಚಿಸಲು ಸಾಕಷ್ಟು ಸಮಯ ಸಿಗುತ್ತದೆ. ಭಾರತಮಾತೆಯ ಬಗ್ಗೆ ಯೋಚಿಸುತ್ತೇನೆ, ಜನರಿಗೆ ಉತ್ತಮ ಶಿಕ್ಷಣ ಸಿಗದಿದ್ದಾಗ, ಸರಿಯಾದ ಚಿಕಿತ್ಸೆ ಇಲ್ಲದಾಗ, ವಿದ್ಯುತ್ ಕಡಿತ ಸಂಭವಿಸಿದಾಗ, ರಸ್ತೆಗಳು ಹಾಳಾದಾಗ ನಮ್ಮ ಭಾರತಮಾತೆಗೆ ನೋವಾಗುತ್ತದೆ” ಎಂದು ಕೇಜ್ರಿವಾಲ್ ಪತ್ರದಲ್ಲಿ ತಿಳಿಸಿದ್ದಾರೆ.

ಎನ್‌ಸಿಪಿಯ ಶರದ್ ಪವಾರ್, ಶಿವಸೇನೆ (ಯುಬಿಟಿ) ಉದ್ಧವ್ ಠಾಕ್ರೆ, ಸಮಾಜವಾದಿ ಪಕ್ಷದಿಂದ ಅಖಿಲೇಶ್ ಯಾದವ್, ಸಿಪಿಐ(ಎಂ)ನ ಸೀತಾರಾಂ ಯೆಚೂರಿ, ಸಿಪಿಐನ ಡಿ ರಾಜಾ, ಪಿಡಿಪಿಯ ಮೆಹಬೂಬಾ ಮುಫ್ತಿ, ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಸೇರಿದಂತೆ ಅನೇಕ ಪ್ರಮುಖ ವಿರೋಧ ಪಕ್ಷದ ನಾಯಕರು ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!