Friday, November 20, 2026

ಪ್ರಾಯೋಗಿಕ ಆವೃತ್ತಿ

ನಾಗಮಂಗಲ| ಕಾಲಭೈರವೇಶ್ವರನಿಗೆ ಹೆಚ್.ಡಿ.ಕುಮಾರಸ್ವಾಮಿ ವಿಶೇಷ ಪೂಜೆ

ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರವರು ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಭಾನುವಾರ ಬೆಳಿಗ್ಗೆ ಮಾಜಿ ಶಾಸಕ ಸುರೇಶ್ ಗೌಡರ ಜೊತೆಗೂಡಿ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ ಎಚ್.ಡಿ‌.ಕುಮಾರಸ್ವಾಮಿ ಶ್ರೀ ಕ್ಷೇತ್ರದ ಪೀಠಾಧ್ಯಕ್ಷರಾದ ಡಾ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪ್ರಸನ್ನನಾಥ ಸ್ವಾಮೀಜಿ ಸ್ವಾಗತಿಸಿದರು. ನಂತರ ಕಾಲ ಭೈರವೇಶ್ವರ ಸ್ವಾಮಿ ಸನ್ನಿಧಿಗೆ ತೆರಳಿ ವಿಶೇಷ ಪೂಜೆಯಲ್ಲಿ ತೊಡಗಿಕೊಂಡರು.

ಈ ಬಾರಿಯ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಗೆಲುವು ನೀಡಬೇಕೆಂದು ಕಾಲಭೈರವೇಶ್ವರ ಸ್ವಾಮಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿರವರ ಗದ್ದುಗೆಗೆ ತೆರಳಿ ಪೂಜೆ ಸಲ್ಲಿಸಿದ ಕುಮಾರಸ್ವಾಮಿ,ನಿರ್ಮಲಾನಂದನಾಥ ಸ್ವಾಮೀಜಿ ರವರ ಜೊತೆ ಸುಮಾರು ಒಂದು ಗಂಟೆಗಳ ಕಾಲ ವಿವಿಧ ವಿಚಾರಗಳ ಚರ್ಚೆ ನಡೆಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ನೆಲ್ಲಿಗೆರೆ ಬಾಲಕೃಷ್ಣ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ