Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನಾಳೆ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ: ಸುರ್ಜೆವಾಲ, ಡಿ.ಕೆ ಶಿವಕುಮಾರ್ ಆಗಮನ

ಮಂಡ್ಯ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ವೆಂಟಕರಮಣೇಗೌಡ (ಸ್ಟಾರ್ ಚಂದ್ರು) ಅವರು ನಾಳೆ (ಏ.1) ನಾಮಪತ್ರ ಸಲ್ಲಿಸಲಿದ್ದು, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ಧಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ಮಂಡ್ಯನಗರದ ಕಾಳಿಕಾಂಬ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ತೆರೆದ ವಾಹನದಲ್ಲಿ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ. ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು ಭಾಗಿಯಾಗಲಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ  ಮತದಾರ ಬಂಧುಗಳು, ಸರ್ವೋದಯ ಪಕ್ಷ, ರೈತಸಂಘದ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು, ಕಾರ್ಮಿಕರು, ಮಹಿಳೆಯರು, ಯುವಕ-ಮಿತ್ರರು ಪ್ರಗತಿಪರ ಚಿಂತಕರು, ಸಾಹಿತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಬೇಕೆಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ