Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ರೈತನಾಯಕ ಪುಟ್ಟಣ್ಣಯ್ಯ ಸಮಾಧಿಗೆ ಪೂಜೆ ಸಲ್ಲಿಸಿದ ಕುಮಾರಸ್ವಾಮಿ

ಪಾಂಡವಪುರ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿರುವ ರೈತ ನಾಯಕ ಹಾಗೂ ಮೇಲುಕೋಟೆ ಕ್ಷೇತ್ರದ ಮಾಜಿ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಸ್ಮಾರಕಕ್ಕೆ ಮಂಡ್ಯ ಲೋಕಸಭಾ ಚುನಾವಣೆಯ ಬಿಜೆಪಿ-ಜೆಡಿಎಸ್ ಮೈತ್ರಿ ಹೆಚ್.ಡಿ.ಕುಮಾರಸ್ವಾಮಿ ಪೂಜೆ ಸಲ್ಲಿಸಿದರು.

ಪಾಂಡವಪುರ ಭಾಗದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಅವರು, ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರೊಂದಿಗೆ ತೆರಳಿ ನಮನ ಸಲ್ಲಿಸಿದರು. ಈ ಬಗ್ಗೆ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಕುಮಾರಸ್ವಾಮಿ, ‘ತಮ್ಮ ಇಡೀ ಜೀವಿತವನ್ನು ಅನ್ನದಾತರ ಒಳಿತಿಗಾಗಿಯೇ ಮೀಸಲಿಟ್ಟು ಹೋರಾಟ ನಡೆಸಿದ ಆ ಚೇತನ (ಪುಟ್ಟಣ್ಣಯ್ಯ)ಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ಹೆಚ್.ಟಿ.ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ, ಜೆಡಿಎಸ್ ಮುಖಂಡ ವಿಜಯಾನಂದ ಸೇರಿದಂತೆ ಮೈತ್ರಿ ಪಕ್ಷಗಳ ಅನೇಕ ಮುಖಂಡರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ