Wednesday, November 18, 2026

ಪ್ರಾಯೋಗಿಕ ಆವೃತ್ತಿ

ದಲಿತರಿಗೆ ಬೆಳಕು ತೋರಿದ ಮಹಾಚೇತನ ಬಾಬುಜೀ: ಡಾ.ಅನ್ನದಾನಿ

ಹಸಿರು ಕ್ರಾಂತಿಯ ಹರಿಕಾರ,ಭಾರತದ ಮಾಜಿ ಉಪ ಪ್ರಧಾನಮಂತ್ರಿಗಳು ಡಾ.ಬಾಬು ಜಗಜೀವನ ರಾಂ ರವರ
117ನೇ ಜನ್ಮದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಇರುವ ಬಾಬುಜಿ ಪ್ರತಿಮೆಗೆ ಜೆಡಿಎಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಮಾಲಾರ್ಪಣೆ ಮಾಡಿದರು.

ನಂತರ ಮಾತನಾಡಿದ ಅವರು ದಲಿತರ ಬದುಕಿಗೆ ಬೆಳಕು ತೋರಿದ ಮಹಾನ್ ಚೇತನಗಳಾದ ಡಾ. ಬಾಬು ಜಗಜೀವನ್ ರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳು ಹಾಗೂ ಬದುಕಿನ ವಿಚಾರಗಳನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು ಎಂದು ಹೇಳಿದರು.

ಜಗಜೀವನ್ ರಾಮ್ ಹಾಗೂ ಅಂಬೇಡ್ಕರ್ ಅವರ ವಿಚಾರಗಳನ್ನು ಜೆಡಿಎಸ್ ಪಕ್ಷ ಯಥಾವತ್ತಾಗಿ ಜಾರಿಗೆ ತರುವ ಮೂಲಕ ದಲಿತರ, ಹಿಂದುಳಿದ ಸಮಾಜಗಳ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಯಕ್ರಮ ಕೊಟ್ಟಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ದಲಿತರ ಮನೆಯಲ್ಲಿ ವಾಸ್ತವ್ಯ ಮಾಡುವ ಮೂಲಕ ದಲಿತರ ಮಾನಸದಲ್ಲಿ ನೆಲೆಸಿರುವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಈ ಬಾರಿಯ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ದಲಿತರು ಬೆಂಬಲಿಸುವ ಅವಶ್ಯಕತೆ ಇದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಡಿ.ರಮೇಶ್, ಜೆಡಿಎಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಸಾತನೂರು ಜಯರಾಮ್, ಜೆಡಿಎಸ್ ಮುಖಂಡರಾದ ಬಿ.ಆರ್ ರಾಮಚಂದ್ರ,ಸುರೇಶ್, ಶಂಕರ್, ಕೃಷ್ಣ,ನವೀನ್ ನಗರಸಭಾ ಸದಸ್ಯ ರಜನಿ ಹಾಗೂ ಆರ್ ಎಪಿಸಿಎಂಎಸ್ ನಿರ್ದೇಶಕ ಸಿ.ಕೆ.ಪಾಪಯ್ಯ ಇನ್ನಿತರರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ