Sunday, November 22, 2026

ಪ್ರಾಯೋಗಿಕ ಆವೃತ್ತಿ

ರಾಜ್ಯಕ್ಕೆ ಬರ ಪರಿಹಾರ ನೀಡದ ಕೇಂದ್ರಕ್ಕೆ ‘ಸುಪ್ರೀಂ’ ನೋಟೀಸ್

ಕರ್ನಾಟಕಕ್ಕೆ ನೀಡಬೇಕಿರುವ ಬರಪರಿಹಾರದ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಪ್ರತಿನಿತ್ಯ ಒಂದಲ್ಲ ಒಂದು ಸುಳ್ಳು ಹೇಳುತ್ತ ಬಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ಅಮಿತ್ ಶಾ ಅವರುಗಳಿಗೆ ಭಾರೀ ಮುಖಭಂಗವಾಗಿದೆ. ಬರ ಪರಿಹಾರ ಬಿಡುಗಡೆ ಮಾಡುವಂತೆ ಆದೇಶಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಕದ ತಟ್ಟಿರುವ ರಾಜ್ಯದ ಮನವಿಯನ್ನು ಆಲಿಸಿದ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದೆ.

ರಾಜ್ಯ ಸರ್ಕಾರ ಬರಪರಿಹಾರ ನೀಡದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಬರ ಪರಿಹಾರದಂಥ ವಿಷಯದಲ್ಲೂ ರಾಜ್ಯಗಳು ನ್ಯಾಯ ಕೇಳಿಕೊಂಡು ಸುಪ್ರೀಂ ಕೋರ್ಟ್ ಕದ ತಟ್ಟುವಂಥ ಸನ್ನಿವೇಶವನ್ನು ಯಾಕೆ ಸೃಷ್ಟಿಸಿದಿರಿ ಎಂದು ಕೇಂದ್ರಕ್ಕೆ ಚಾಟಿ ಬೀಸಿದೆ. ಅಲ್ಲದೇ ಎರಡು ವಾರಗಳೊಳಗೆ ಸಮಸ್ಯೆ ಬಗೆಹರಿಸುವ ಕುರಿತು ವಾಗ್ದಾನ ನೀಡಬೇಕೆಂದು ತಾಕೀತು ಮಾಡಿದರು.

ಈ ಹಿನ್ನೆಲೆಯಲ್ಲಿ ಅಡ್ವೊಕೇಟ್ ಜನರಲ್ ಸೂಕ್ತ ಕ್ರಮ ಕೈಗೊಳ್ಳಲು ಎರಡು ವಾರಗಳ ಕಾಲಾವಕಾಶ ಕೋರಿದರು. ಎರಡು ವಾರಗಳೊಳಗೆ ಸಮಸ್ಯೆ ಇತ್ಯರ್ಥಗೊಳಿಸಬೇಕು, ತೆಗೆದುಕೊಂಡ ಕ್ರಮದ ಕುರಿತು ಮಾಹಿತಿ ನೀಡಬೇಕೆಂದು ಆದೇಶಿಸಿದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮುಂದಕ್ಕೆ ಹಾಕಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ