Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಹಳೇ ದ್ವೇಷ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳಿಬ್ಬರು ಮಾರಕಾಸ್ತ್ರಗಳಿಂದ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಕಳೆದ ಮಧ್ಯ ರಾತ್ರಿ ನಡೆದಿದೆ.

ಅಕ್ಷಯ್ (24) ಹತ್ಯೆಯಾದ ಯುವಕ. ಆತನ ಸ್ನೇಹಿತ ಹೇಮಂತ ಗಂಭೀರವಾಗಿ ಗಾಯಗೊಂಡಿದ್ದು,ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ವರ್ಷ ಚೀಟಿ ವ್ಯವಹಾರದ ಹಿನ್ನಲೆಯಲ್ಲಿ ಅಕ್ಷಯ್ ಹಾಗೂ ಆತನ ಸ್ನೇಹಿತ ಸಾಹುಕಾರ್ ಭರತ್ ಮಧ್ಯೆ ಗಲಾಟೆ ನಡೆದಿತ್ತು. ಆ ಸಂದರ್ಭದಲ್ಲಿ ಅಕ್ಷಯ್ ಸಾಹುಕಾರ್ ಭರತ್ ಮತ್ತು ಪ್ರಮೋದ್ ಮೇಲೆ ಹಲ್ಲೆ ನಡೆಸಿದ್ದ.ಈ ದ್ವೇಷದ ಹಿನ್ನಲೆಯಲ್ಲಿ ಸಾಹುಕಾರ್ ಭರತ್ ಹಾಗೂ ಪ್ರಮೋದ್ ಅಲಿಯಾಸ್ ಕಾಡು ಅಕ್ಷಯನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ರಾತ್ರಿ ಅಕ್ಷಯನನ್ನು ಫೋನ್ ಮಾಡಿ ಭರತ್ ಹಾಗೂ ಪ್ರಮೋದ್ ಕರೆಸಿಕೊಂಡಿದ್ದಾರೆ. ಸ್ವರ್ಣಸಂದ್ರದ ಬಡಾವಣೆಯ ಅರಳಿಕಟ್ಟೆ ಮುಂಭಾಗ ಅಕ್ಷಯ್ ಹಾಗೂ ಆತನ ಸ್ನೇಹಿತ ಹೇಮಂತನ ಮೇಲೆ ಮಚ್ಚು ಲಾಂಗ್ ಗಳಿಂದ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅಕ್ಷಯ್ ಸ್ಥಳದಲ್ಲಿಯೇ ಮೃತಪಟ್ಟರೆ, ಹೇಮಂತ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕಳೆದ ವರ್ಷ ಚೀಟಿ ವ್ಯವಹಾರದ ಹಿನ್ನೆಲೆಯಲ್ಲಿ ಅಕ್ಷಯ್ ಹಾಗೂ ಸಾಹುಕಾರ್ ಭರತ್ ಮಧ್ಯೆ ಒಂದು ವರ್ಷದ ಹಿಂದೆ ಗಲಾಟೆ ನಡೆದಿತ್ತು. ಈ ಸಂದರ್ಭದಲ್ಲಿ ಅಕ್ಷಯ್ ಭರತ್ ಮೇಲೆ ಹಲ್ಲೆ ಮಾಡಿದ್ದ. ಈ ಬಗ್ಗೆ ಮಂಡ್ಯ ಪಶ್ಚಿಮ ಪೋಲಿಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಚೀಟಿ ಹಣಕಾಸಿನ ವಿಚಾರದಲ್ಲಿದ್ದ ದ್ವೇಷವೇ ಅಕ್ಷಯ್ ಹತ್ಯೆಗೆ ಕಾರಣವಾಗಿದೆ.

ಸ್ಥಳಕ್ಕೆ ಮಂಡ್ಯ ಪಶ್ಚಿಮ ಠಾಣೆಯ ಸಬ್ ಇನ್ಸ್ಪೆಕ್ಟರ್ ಶೇಷಾದ್ರಿ ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಕ್ಷಯ್ ಕೊಲೆ ಮಾಡಿರುವ ಆರೋಪಿಗಳ ಪತ್ತೆಗಾಗಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ