Friday, September 20, 2024

ಪ್ರಾಯೋಗಿಕ ಆವೃತ್ತಿ

ಅಭಿವೃದ್ದಿ ಬಿಟ್ಟು ಕಣ್ಣೀರು ಹಾಕೊದನ್ನೇ ಕರಗತ ಮಾಡಿಕೊಂಡಿದ್ದಾರೆ: ರವಿಕುಮಾರ್ ಗಣಿಗ

ಮಾಜಿ ಮುಖ್ಯಮಂತ್ರಿ ಹೆಚ್ಎಚ್ ಡಿ ಕುಮಾರಸ್ವಾಮಿಯವರು ಮಂಡ್ಯ ಜಿಲ್ಲೆಯನ್ನು ಅಭಿವೃದ್ದಿ ಮಾಡುವುದನ್ನು ಬಿಟ್ಟು, ಇಲ್ಲಿಗೆ ಬಂದು ಜನರ ಮುಂದೆ ಕಣ್ಣೀರು ಹಾಕುವುದು, ಹೋಗೋದನ್ನೆ ಕರಗತ ಮಾಡಿಕೊಂಡಿದ್ದಾರೆಂದು ಶಾಸಕ ರವಿಕುಮಾರ್ ಗಣಿಗ ಟೀಕಿಸಿದರು.

ಮಂಡ್ಯ ತಾಲೂಕಿನ ಚಿಕ್ಕಮಂಡ್ಯ ಗ್ರಾಮದಿಂದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಜೊತೆ ಪ್ರಚಾರ ಆರಂಭಿಸಿ ವಿವಿಧ ಗ್ರಾಮಗಳಿಗೆ ತೆರಳಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಎದುರಾಳಿ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಅವಧಿಯಲ್ಲಾದ ಅಭಿವೃದ್ದಿಯನ್ನು ತಿಳಿಸಿ ಮತ ಕೇಳಲಿ ಎಂದು ಒತ್ತಾಯಿಸಿದರು.

ನುಡಿದಂತೆ ನಡೆದಿದ್ದೇವೆ

ಕಳೆದ ವಿಧಾನಸಭೆ ಚುನಾವಣೆ ವೇಳೆ ಗೃಹಲಕ್ಷ್ಮಿಯೋಜನೆ ಜಾರಿಗೊಳಿಸಿ ಮಹಿಳೆಯರಿಗೆ ಪ್ರತಿ ತಿಂಗಳು 2000 ನೀಡುವುದಾಗಿ ಕಾಂಗ್ರೆಸ್ ಘೋಷಿಸಿದಾಗ ನಮ್ಮ ವಿರೋಧಿಗಳು ನಕ್ಕು ಇದೆಲ್ಲ ಸಾಧ್ಯವಾ ಎಂದರು ಆದರೆ ಇದೀಗ ಕಾಂಗ್ರೆಸ್ ಸರ್ಕಾರಕ್ಕೆ ವರ್ಷ ತುಂಬುವ ಮುನ್ನವೇ ಮಹಿಳೆಯರಿಗೆ ಪ್ರತಿ ತಿಂಗಳು 2000, ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಸೇರಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದು ಹೇಳಿದರು.

ಇದೀಗ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 25 ಗ್ಯಾರಂಟಿ ಘೋಷಿಸಿದೆ ಇದರಲ್ಲಿ ಮಹಿಳೆಯರಿಗೆ 1 ಲಕ್ಷ ರೂ ನೀಡುವ ಯೋಜನೆ ಇದೆ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ರಿಗೆ ಮತ ನೀಡಿ ಗೆಲ್ಲಿಸಿ ಕೊಡುವಂತೆ ಮನವಿ ಮಾಡಿದರು.

ಆಶೀರ್ವದಿಸಿ ಗೆಲ್ಲಿಸಿ

ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ ( ಸ್ಟಾರ್ ಚಂದ್ರು ) ಮಾತನಾಡಿ, ನಾನೊಬ್ಬ ರೈತನ ಮಗ, ನಿಮ್ಮ ಜಿಲ್ಲೆಯವನು, ಕಾಂಗ್ರೆಸ್ ನಾಯಕರೆಲ್ಲ ಒಗ್ಗೂಡಿ ನನ್ನನ್ನು ಅಭ್ಯರ್ಥಿಯನ್ನಾಗಿಸಿದ್ದಾರೆ, ನಿಮ್ಮಗಳ ಆಶೀರ್ವಾದದಿಂದ ನನ್ನನ್ನು ಸಂಸತ್ ಗೆ ಚುನಾಯಿಸುವಂತೆ ಮನವಿ ಮಾಡಿದರು.

ಕೆರೆಗೂಡಿನಲ್ಲಿ ಬಿರುಸಿನ ಪ್ರಚಾರ

ಧ್ವಜ ಪ್ರಕರಣದಲ್ಲಿ ರಾಜ್ಯದ ಗಮನಸೆಳೆದಿದ್ದ ಕೆರಗೋಡು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಅಬ್ಬರದ ಪ್ರಚಾರ ನಡೆಸಿ ಕಾಂಗ್ರೆಸ್ ನ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾದರು. ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಮಹಿಳೆಯರು ಪೂರ್ಣ ಕುಂಭ ಹೊತ್ತು ಸ್ವಾಗತಿಸಿದರೆ, ಕಾರ್ಯಕರ್ತರು ಪಟಾಕಿ ಸಿಡಿಸಿ, ಜೈಕಾರ ಕೂಗುವ ಮೂಲಕ ಬರಮಾಡಿಕೊಂಡರು. ನೂರಾರು ಕಾರ್ಯಕರ್ತರು ಪ್ರಚಾರದಲ್ಲಿ ಭಾಗಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಹೆಚ್.ಬಿ.ರಾಮು, ಪಕ್ಷದ ಮುಖಂಡರಾದ ಕೀಲಾರ ರಾಧಾಕೃಷ್ಣ, ಜಿ.ಪಂ ಮಾಜಿ ಸದಸ್ಯ ಯೋಗೇಶ್ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!