ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಲವು ಜನಪರ ಹಾಗೂ ರೈತರ ಪರವಾಗಿ ಯೋಜನೆ ಜಾರಿಗೆ ತಂದು ಮಾದರಿ ಮುಖ್ಯಮಂತ್ರಿಯಾಗಿದ್ದಾರೆ, ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದರಿಂದ ಮತ ನೀಡಬೇಕು ಎಂದು ಜೆಡಿಎಸ್ ಮುಖಂಡ ಪುಟ್ಟಸ್ವಾಮಿಗೌಡ ಮನವಿ ಮಾಡಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಚ್ಡಿಕೆ ಆಡಳಿತದಲ್ಲಿ ಸಾರಾಯಿ ನಿಷೇಧ, ಲಾಟರಿ ನಿಷೇಧ, ಗ್ರಾಮ ವಾಸ್ತವ್ಯ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಿದ್ದ ಕೀರ್ತಿ ಇವರದು, ಸದಾ ಜನಪರ ಸಮಾಜಮುಖಿ ಚಿಂತನೆಗಳನ್ನು ಇಟ್ಟುಕೊಂಡಿರುವ ವ್ಯಕ್ತಿಯು ನಮ್ಮ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಲಿದ್ದಾರೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಬಂದ ಮೇಲೆ ಮಂಡ್ಯ ಜಿಲ್ಲೆಯಷ್ಟೇ ಎಲ್ಲ ಇಡೀ ರಾಜ್ಯದಲ್ಲಿಯೇ ಅಭಿವೃದ್ಧಿ ಎಂಬುದೇ ಇಲ್ಲವಾಗಿದೆ, ಕೇವಲ ಗ್ಯಾರಂಟಿಗಳಿಗೆ ಹಣ ಸಂಗ್ರಹಿಸುತ್ತಾ ನೀರಾವರಿ ಯೋಜನೆಗಳು ನೆನಗುದಿಗೆ ಬಿದ್ದಿರುವುದರಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಸಂಖ್ಯೆ ಹೆಚ್ಚುತ್ತಿದೆ. ಇನ್ನಾದರೂ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಜಯಶೀಲರನ್ನಾಗಿ ಮಾಡಬೇಕು ಎಂದು ಮನವಿ ಮಾಡಿದರು.
ಜೆಡಿಎಸ್ ಮುಖಂಡರಾದ ಅಂಬುಜಮ್ಮ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಒಂದೂ ಬೆಳೆಯನ್ನು ಬೆಳೆಯಲು ಸಾಧ್ಯವಾಗಿಲ್ಲ, ಹಾಗಾಗಿ ಮೂರು ವರ್ಷ ರೈತರ ಆರ್ಥಿಕತೆ ಹಿಂದಕ್ಕೆ ಹೋಗಿದ್ದು ಈ ನಷ್ಟವನ್ನು ತುಂಬಿ ಕೊಡಬೇಕೆಂದು ಆಗ್ರಹಿಸಿದರು.
ಮುಖಂಡರಾದ ರಾಮಣ್ಣ, ನಾಗಲಿಂಗಯ್ಯ ಬಿದರಕೋಟೆ ಇದ್ದರು.




