Tuesday, November 24, 2026

ಪ್ರಾಯೋಗಿಕ ಆವೃತ್ತಿ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ| ವಿಶೇಷ ತನಿಖಾ ತಂಡದಿಂದ ನ್ಯಾಯ ಸಿಗಲಿದೆ: ಹೆಚ್.ವಿಶ್ವನಾಥ್

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣವನ್ನು ತನಿಖೆ ನಡೆಸಲು ರಚಿಸಲಾಗಿರುವ ವಿಶೇಷ ತನಿಖಾ ತಂಡದಲ್ಲಿ, ಸಂತ್ರಸ್ಥರಿಗೆ ನ್ಯಾಯ ಸಿಗಲಿದೆ ಎಂದು ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಐಟಿಯಲ್ಲಿ ಕರ್ನಾಟಕ ಪೊಲೀಸರು ಇದ್ದಾರೆ, ನಮ್ಮ ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇಲ್ಲದಿದ್ದರೆ ಹೇಗೆ ? ಈ ಪ್ರಕರಣ ಕುರಿತು ಸಿಬಿಐ ತನಿಖೆಗೆ ಒತ್ತಡ ಹಾಕುತ್ತಿರುವುದು ಸರಿಯಲ್ಲ, ವಿಶೇಷ ತನಿಖಾ ತಂಡದಿಂದ ನ್ಯಾಯ ಸಿಗಲಿದೆ ಸ್ಪಷ್ಟಪಡಿಸಿದರು.

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ವಿಚಾರದಲ್ಲಿ ಎಲ್ಲಾ ರಾಜಕಾರಣಿಗಳು ಸೇರಿ ಕರ್ನಾಟಕ ರಾಜ್ಯದ ಜನತೆಗೆ ಮಸಿ ಬಳಿಯುತ್ತಿದ್ದಾರೆ, ಪ್ರಕರಣ ಬೆಳಕಿಗೆ ಬಂದ ನಂತರ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ, ಆದರೂ ಕೂಡ ಸುಖ ಸುಮ್ಮನೆ ಎಲ್ಲರೂ ಮಾತನಾಡುತ್ತಿದ್ದಾರೆ, ಇದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈ ಪ್ರಕರಣದಲ್ಲಿ ಅನಾವಶ್ಯಕವಾಗಿ ಜಾತಿ ಮತ್ತು ಧರ್ಮವನ್ನು ಎಳೆದು ತರಲಾಗುತ್ತಿದೆ, ಎಲ್ಲರೂ ನಮ್ಮ ಸ್ನೇಹಿತರೆ ಆದರೆ ಈ ವಿಚಾರದಲ್ಲಿ ತಪ್ಪು ಮಾಡುತ್ತಿದ್ದಾರೆ. ಪರಸ್ಪರ ಆರೋಪ ಪ್ರತ್ಯಾರೋಪ, ಕೆಸರೆರೆಚಾಟ ಸರಿಯಾದ ಬೆಳವಣಿಗೆಯಲ್ಲ ಎಂದು ಹೇಳಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ