Thursday, September 19, 2024

ಪ್ರಾಯೋಗಿಕ ಆವೃತ್ತಿ

ಪ್ರಜ್ವಲ್ ರೇವಣ್ಣ ಪ್ರಕರಣ| ಅಬಲೆಯರ ರಕ್ಷಣೆಗಾಗಿ ಕೆ.ಆರ್.ಎಸ್ ಪಕ್ಷದಿಂದ ಹಾಸನ ಚಲೋ

ಸಂಸದ ಪ್ರಜ್ವಲ್ ತನ್ನ ಬಳಿಗೆ ಸಹಾಯ ಯಾಚಿಸಿ ಬಂದ ಹಾಸನ ಜಿಲ್ಲೆಯ ನೂರಾರು ಹೆಣ್ಣುಮಕ್ಕಳನ್ನು, ಅಧಿಕಾರ ಮತ್ತು ಸಾಂದರ್ಭಿಕ ಲಾಭ ಪಡೆದು ಲೈಂಗಿಕವಾಗಿ ಶೋಷಣೆ ಮಾಡಿರುವುದನ್ನು ಖಂಡಿಸಿ ಮೇ 13ರಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ”ಅಬಲೆಯರನ್ನು ಗೌರವಿಸೋಣ ಅತ್ಯಾಚಾರಿಗೆ ತಕ್ಕ ಶಾಸ್ತಿ ಮಾಡೋಣ” ಹಾಸನ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಮಂಡ್ಯ ಜಿಲ್ಲಾಧ್ಯಕ್ಷ ರಮೇಶ್ ಗೌಡ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಜವಾಬ್ದಾರಿಯುತ ಸಂಸದ ಸ್ಥಾನದಲ್ಲಿರುವ ಪುಜ್ವಲ್ ಸಹಾಯ ಕೋರಿ ಬಂದವರನ್ನು ಶೋಷಣೆ ಮಾಡಿರುವುದು ಖಂಡನೀಯ. ಹೆಣ್ಣು ಮಕ್ಕಳು ಇಲ್ಲಿ ಬಲಿಪಶುಗಳಾಗಿದ್ದು ಅವರದು ಯಾವುದೇ ತಪ್ಪಿರುವುದಿಲ್ಲ. ಇದನ್ನು ನಾಗರಿಕ ಸಮಾಜ ಸೂಕ್ಷ್ಮವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಗುತ್ತದೆ ಸಂತ್ರಸ್ತ ಮಹಿಳೆಯರ ಕುಟುಂಬಸ್ಥರು, ಸಂಬಂಧಿಕರು ಮತ್ತು ಪರಿಚಯಸ್ಸರು ಸೇರಿದಂತೆ ಇಡೀ ಸಮಾಜ ಈ ಮಹಿಳೆಯರೊಂದಿಗೆ ನಿಂತು ಅವರಲ್ಲಿ ಧೈರ್ಯ ತುಂಬುವ ವಾತಾವರಣ ಸೃಷ್ಟಿಸಬೇಕು ಎಂದು ಕೆಆರ್‌ಎಸ್ ಪಕ್ಷ ಹಾಸನ ಜಿಲ್ಲೆಯ ಜನರನ್ನೂ ಒಳಗೊಂಡು ಇಡೀ ಕರ್ನಾಟಕ ಜನತೆಗೆ ಮನವಿ ಮಾಡುತ್ತದೆ ಎಂದರು.

ತನ್ನ ಜವಾಬ್ದಾರಿಯುತ ಸಂಸದ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡು, ಅಸಹಾಯಕ ಹೆಣ್ಣು ಮಕ್ಕಳನ್ನು ಶೋಷಣೆಗೊಳಪಡಿಸಿದಲ್ಲದೆ, ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿರುವ ಪುಜ್ವಲ್ ರೇವಣ್ಣ ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸುವುದರ ಮೂಲಕ ಯಾವುದೇ ಜವಾಬ್ದಾರಿಯುತ ಜನಪ್ರತಿನಿಧಿಯಾಗಲಿ, ಇತರರೇ ಆಗಲಿ ಇಂತಹ ಕೃತ್ಯಗಳನ್ನು ಎಸಗಲು ಆಗದಂತೆ ತಡೆಯೊಡ್ಡಬೇಕಾಗಿದೆ ಎಂದು ಸರ್ಕಾರವನ್ನು ಒತ್ತಾಯಿಸಿದರು.

ಪೆನ್ ಡ್ರೈವ್ ಪ್ರಕರಣವು ಪಾರದರ್ಶಕವಾಗಿ ತನಿಖೆ ಆಗುವಂತೆ ನಾವು ಸರ್ಕಾರವನ್ನು ಆಗ್ರಹಿಸಬೇಕು. ಪಾರದರ್ಶಕ, ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕಾದರೆ ಪ್ರಜ್ವಲ್ ರೇವಣ್ಣ ಕುಟುಂಬದ ಕೃಪಾಕಟಾಕ್ಷದಿಂದ ಹಾಸನ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಕುಟುಂಬದ ಋಣದಲ್ಲಿದ್ದೇವೆಂದು ಭಾವಿಸಿರುವ ಹಲವಾರು ನೌಕರರು ಹಾಗೂ ಅಧಿಕಾರಿಗಳನ್ನು ಈ ಪ್ರಕರಣದ ತನಿಖೆ ಮುಗಿಯುವವರೆಗೆ ಬೇರೆ ಜಿಲ್ಲೆಗೆ ವರ್ಗಾಯಿಸಿ ಪ್ರಕರಣದ ಸಾಕ್ಷ್ಯಗಳನ್ನು ತಿರುಚುವ, ಬೆದರಿಸುವುದನ್ನು ತಪ್ಪಿಸಬೇಕೆಂದು ಆಗ್ರಹಿಸಿದರು.

ಪ್ರಸ್ತುತ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಪ್ರಥಮವಾಗಿ ದೂರು ಸಲ್ಲಿಸಿದ್ದು ಕೆ.ಆರ್.ಎಸ್ ಪಕ್ಷ, ಈ ಪ್ರಕರಣ ನಮ್ಮ ಗಮನಕ್ಕೆ ಬಂದ ತಕ್ಷಣ ದಿನಾಂಕ 27-04-2024 ರಂದು ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಲಿಂಗೇಗೌಡ ಎಸ್ ಎಚ್. ಅವರು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ನಮ್ಮ ದೂರಿನ ಆಧಾರದ ಮೇಲೆ ತಕ್ಷಣ ಕ್ರಮ ಕೈಗೊಂಡಿದ್ದರೆ. ಪ್ರಜ್ವಲ್ ರೇವಣ್ಣ, ತಪ್ಪಿಸಿಕೊಳ್ಳುವುದನ್ನು ತಡೆಯಬಹುದಿತ್ತು ಎಂದರು.

ಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಮಲ್ಲೇಶ್ ಹೆಬ್ಬಕವಾಡಿ, ಮುಖಂಡರಾದ ಶಶಿಧರ್ ವೈ.ಕೆ, ಯೋಗೇಶ್ ಹೆಚ್.ಇ., ರವೀಂದ್ರ ಹಾಗೂ ವಿಶ್ವನಾಥ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!