Friday, November 20, 2026

ಪ್ರಾಯೋಗಿಕ ಆವೃತ್ತಿ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ | ಮರಿತಿಬ್ಬೇಗೌಡರಿಗೆ ‘ಕೈ’ ಬಿ.ಫಾರಂ ವಿತರಿಸಿದ ಡಿ.ಕೆ.ಶಿವಕುಮಾರ್

ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರಿಗೆ ಕೆಪಿಸಿಸಿ ಅಧ್ಯಕ್ಷ,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಬಿ.ಫಾರಂ ವಿತರಿಸಿದರು.

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಈ ಬಾರಿಯೂ ಅತ್ಯಧಿಕ ಮತಗಳಿಂದ ಗೆದ್ದು ಬನ್ನಿ ಎಂದು ಡಿ.ಕೆ.ಶಿವಕುಮಾರ್ ಅವರು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡರಿಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ,ಮಂಡ್ಯ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ