Friday, November 20, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಪೆನ್ ಡ್ರೈವ್ ಪ್ರಕರಣದಲ್ಲಿ ರಾಜಕೀಯ ಆರೋಪ; ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ರಾಜ್ಯದ ನೈಜ್ಯ ಸಮಸ್ಯೆಗಳನ್ನು ಮರೆಮಾಚಿ ರಾಜ್ಯ ಸರ್ಕಾರವು ಪೆನ್ ಡ್ರೈವ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಮಳವಳ್ಳಿ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಮಳವಳ್ಳಿ ಪಟ್ಟಣದ ಆನಂತ್‌ರಾಂ ವೃತ್ತದಲ್ಲಿ ಪ್ರತಿಭಟಿಸಿದ ಜೆಡಿಎಸ್ ಕಾರ್ಯಕರ್ತರು, ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ, ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲ, ಕೃಷಿಗೆ ನೀರು ಬಿಡಲು ಯೋಗ್ಯತೆ ಇಲ್ಲದ ಸರ್ಕಾರ ಪೆನ್‌ ಡ್ರೈವ್ ವಿಚಾರ ಎತ್ತಿಕೊಂಡು ಜನರ ದಿಕ್ಕನ್ನು ತಪ್ಪಿಸಲು ಹೊರಟಿದೆ ಎಂದು ಮಾಜಿ ಶಾಸಕ ಡಾ.ಅನ್ನದಾನಿ ಕಿಡಿಕಾರಿದರು.

ಹೆಚ್.ಡಿ.ರೇವಣ್ಣ ವಿರುದ್ಧ ಮಹಿಳೆಯ ಕಿಡ್ನಾಪ್ ಕೇಸ್ ಹಾಕಿ ದೇವೇಗೌಡರ ಕುಟುಂಬವನ್ನು ಜೈಲಿಗಟ್ಟುವ ದುರುದ್ದೇಶದಿಂದ ಕಾಂಗ್ರೆಸ್ ಹುನ್ನಾರ ನಡೆಸಿದೆ, ಆದರೇ ಮಹಿಳೆ ಸತ್ಯವನ್ನು ಹೇಳಿದ್ದಾರೆ, ಸತ್ಯವನ್ನು ಹೇಳಿದ ವಕೀಲ ದೇವರಾಜೇಗೌಡರನ್ನು ಕೂಡ ಹುನ್ನಾರದಿಂದ ಬಂಧಿಸಲಾಗಿದೆ, ಶಿವರಾಮೇಗೌಡ ಎಂಬ ವ್ಯಕ್ತಿಯನ್ನು ಜೊತೆಯಲ್ಲಿಟ್ಟುಕೊಂಡು ದೇವೇಗೌಡರು, ಕುಮಾರಸ್ವಾಮಿ ಅವರ ಮಸಿ ಬಳಿಯಲು ಡಿ.ಕೆ.ಶಿವಕುಮಾರ್ ಯತ್ನಿಸಿದ್ದಾರೆಂದು ಕಿಡಿಕಾರಿದರು.

ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ರವಿ ಮಾತನಾಡಿ, ಹಿರಿಯ ರಾಜಕಾರಣಿ ಪ್ರಧಾನಿ ದೇವೇಗೌಡ ರಾಜಕೀಯ ಜೀವನಕ್ಕೆ ಮಸಿ ಬಳೆಯಲು ಕಾಂಗ್ರೆಸ್ ಸರ್ಕಾರ ಹುನ್ನಾರ ನಡೆಸುತ್ತಿರುವುದು ಜನರಿಗೆ ಅರ್ಥವಾಗುತ್ತದೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರೇ ಬುದ್ದಿ ಕಲಿಸಲಿದ್ದಾರೆ, ಅಧಿಕಾರದ ಲಾಭ ಪಡೆದು ಬಾಯಿಗೆ ಬಂದಂತೆ ಮಾತನಾಡಿರುವ ಶಿವರಾಮೇಗೌಡರ ನಡೆಯನ್ನು ಖಂಡಿಸುತ್ತೇವೆಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಆನಂತ್‌ರಾಂ ವೃತ್ತಕ್ಕೆ ಆಗಮಿಸಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಶಿವರಾಮೇಗೌಡರ ವಿರುದ್ದ ಘೋಷಣೆ ಕೂಗಿದ ನಂತರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ