ವಿಧಾನ ಪರಿಷತ್ತಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಅವರು ಮೇ 14ರಂದು ಬೆಳಿಗ್ಗೆ 10.30 ಗಂಟೆಗೆ ಮೈಸೂರಿನ ವಿಭಾಗಿಯ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಂಡ್ಯ ಜಿಲ್ಲಾ ಉಸ್ತುವಾರಿ ಮತ್ತು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಮಂಡ್ಯ ಶಾಸಕ ಪಿ. ರವಿಕುಮಾರ್ ಗೌಡ (ಗಣಿಗ) ಅವರ ಉಪಸ್ಥಿತರಿರಲಿದ್ದಾರೆ.
ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ನಗರಸಭೆಯ ಎಲ್ಲಾ ಹಾಲಿ, ಮಾಜಿ ಹಾಗೂ ಪರಾಜಿತ ಸದಸ್ಯರುಗಳು ಅಭಿಮಾನಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆ ಯಲ್ಲಿ ಆಗಮಿಸುವಂತೆ ಮಂಡ್ಯ ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಕೆ. ರುದ್ರಪ್ಪ ಮನವಿ ಮಾಡಿದ್ದಾರೆ.




