Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸಾಲದ ವಸೂಲಿ ಸಮಯದಲ್ಲಿ ಮೈಕ್ರೋ ಫೈನಾನ್ಸ್ ಗಳು ಕಿರುಕುಳ ನೀಡಿದರೆ ಕ್ರಮ: ಡಾ.ಕುಮಾರ

ಮೈಕ್ರೋ ಫೈನಾನ್ಸ್ ಕಂಪನಿಯವರು ರೈತರಿಗೆ ಮತ್ತು ಸಾರ್ವಜನಿಕರಿಗೆ ನೀಡಿರುವ ಸಾಲ ವಸೂಲಾತಿ ಮಾಡುವ ಸಂದರ್ಭದಲ್ಲಿ ಅವರುಗಳ ಮೇಲೆ ಯಾವುದೇ ತರಹ ಕಿರುಕುಳ ಮತ್ತು ಒತ್ತಡ ನೀಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ರೈತರಿಗೆ ಸಾರ್ವಜನಿಕರಿಗೆ ನೀಡಿರುವ ಸಾಲ ವಸೂಲಾತಿ ಮಾಡುವಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಜನಗಳ ಮೇಲೆ ಕಿರುಕುಳ ಹಾಗೂ ಒತ್ತಡ ನೀಡುತ್ತಿರುವುದು ಕಂಡು ಬಂದಿದೆ. ಇದು ಅತಿರೇಕವಾದಲ್ಲಿ ಅಥವಾ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಸಾಲ ವಸೂಲಾತಿ ಮಾಡುವ ಮೈಕ್ರೋಪೈನಾನ್ಸ್ ಅವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಹಾಗೂ ಕಿರುಕುಳ ನೀಡಿದ ಮೈಕ್ರೋಪೈನಾನ್ಸ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

2 ರಿಂದ 3 ತಿಂಗಳು ಸಾಲ ವಸೂಲಾತಿ ಮಾಡುವಂತಿಲ್ಲ

ಸರ್ಕಾರ ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿ 77 ಸಾವಿರ ರೈತರಿಗೆ ರೂ 34 ಕೋಟಿ ಹಣವನ್ನು ಬರ ಪರಿಹಾರವಾಗಿ ನೀಡಿದೆ. ಬರಗಾಲ ಇರುವ ಹಿನ್ನೆಲೆಯಲ್ಲಿ ಮಾನವೀಯತೆ ದೃಷ್ಟಿಯಿಂದ ಎರಡು ಮೂರು ತಿಂಗಳುಗಳ ಕಾಲ ಸಾಲ ಮರುಪಾವತಿಗೆ ಅವಕಾಶ ನೀಡಿ ಒತ್ತಡ ಹೇರದಂತೆ ನೋಡಿಕೊಳ್ಳಿ ಸೂಚಿಸಿದರು.

ಬೆಳಗಿನ ಜಾವ ಹಾಗೂ ರಾತ್ರಿ ವೇಳೆಯಲ್ಲಿ ಸಾಲ ವಸೂಲಾತಿ ಮಾಡುವವರು, ಪ್ರತಿದಿನ ಮನೆಗೆ ಭೇಟಿ ನೀಡುತ್ತಿದ್ದು, ಇದರಿಂದ ಸಾರ್ವಜನಿಕರು ತಮಗೆ ಪ್ರತಿದಿನದ ಕೆಲಸ ಮಾಡಲು ತೊಂದರೆ ಹಾಗೂ ಕಿರಿ ಕಿರಿ ಉಂಟಾಗುತ್ತಿದೆ ಎಂದು ದೂರುಗಳು ಬರುತ್ತಿದ್ದು, ಸಾಲ ವಸೂಲಾತಿಗೆ ಸರಿಯಾದ ಸಮಯ ನಿಗದಿಮಾಡಿಕೊಳ್ಳುವಂತೆ ತಿಳಿಸಿದರು.

ಸಾಲ ಮರುಪಾವತಿಗೆ ಸಂಬಂಧಿಸಿದಂತೆ ಮೈಕ್ರೋಪೈನಾನ್ಸ್ ಗಳು ತೊಂದರೆ ನೀಡುತ್ತಿದ್ದಲ್ಲಿ ಸಹಾಯವಾಣಿ ಸಂಖ್ಯೆ: 18004255654, 18001021080, 011 47174410, ನ್ನು ಸಂಪರ್ಕಿಸಬಹುದು ಎಂದರು.

ಸಭೆಯಲ್ಲಿಲೀಡ್ ಬ್ಯಾಂಕ್ ಮ್ಯಾನೇಜರ್ ಅರುಣ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜ್, ಜಿಲ್ಲಾ ವಾರ್ತಾಧಿಕಾರಿ ಎಸ್ ಎಚ್ ನಿರ್ಮಲ, ಹಾಗೂ ವಿವಿಧ ಮೈಕ್ರೋ ಫೈನಾನ್ಸ್ ನ ವ್ಯವಸ್ಥಾಪಕರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ