Friday, November 20, 2026

ಪ್ರಾಯೋಗಿಕ ಆವೃತ್ತಿ

ದಕ್ಷಿಣ ಶಿಕ್ಷಕರ ಕ್ಷೇತ್ರ| ಎನ್.ಡಿ.ಎ ಅಭ್ಯರ್ಥಿಯಾಗಿ ವಿವೇಕಾನಂದ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಎನ್.ಡಿ.ಎ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ ಗುರುವಾರ ಮೈಸೂರಿನ ಪ್ರಾದೇಶಿಕ ಆಯುಕ್ತ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಜಿ.ಟಿ.ದೇವೇಗೌಡ, ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ರಾಜವಂಶಸ್ಥ ಯದುವೀರ್ ಭಾಗವಹಿಸಿದರು.

ನಿಂಗರಾಜ್ ಗೌಡಗೆ ಸಿಗದ ಬಿ.ಫಾರಂ

ಈ ಮೊದಲು ಬಿಜೆಪಿ ಈ.ಸಿ.ನಿಂಗರಾಜ್ ಗೌಡ ಅವರನ್ನು ಎನ್.ಡಿ.ಎ ಅಭ್ಯರ್ಥಿ ಕಣಕ್ಕಿಳಿಸುವುದಾಗಿ ಬಿಜೆಪಿ ನಾಯಕರು ಹೆಸರು ಪ್ರಕಟಿಸಿದ್ದರು. ಆದರೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಭೇಟಿಯಾಗಿ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ತಮ್ಮ ಪಕ್ಷಕ್ಕೆ ಬಿಟ್ಟುಕೊಡುವಂತೆ ಪಟ್ಟು ಹಿಡಿದು, ಅದನ್ನು ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಈ ಹಿನ್ನೆಲೆಯಲ್ಲಿ ನಿಂಗರಾಜ್ ಗೌಡ ಬಿಜೆಪಿ ಪಕ್ಷದ ಬಿ.ಫಾರಂ ಇಲ್ಲದೇ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ