Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಬರ ಪರಿಹಾರದ ಹಣ ಸಾಲಕ್ಕೆ ಜಮೆ: ಜಿಲ್ಲಾಧಿಕಾರಿ ಬ್ಯಾಂಕುಗಳಿಗೆ ನೀಡಿದ ಸೂಚನೆ ಏನು ?

ಮಂಡ್ಯ ಜಿಲ್ಲೆಯಾದ್ಯಂತ ರೈತರಿಗೆ ಬಿಡುಗಡೆಯಾದ ಬರ ಪರಿಹಾರದ ಹಣವನ್ನು ಬ್ಯಾಂಕುಗಳು ಸಾಲಕ್ಕೆ ಜಮೆ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ ಹೊರಡಿಸಿದ್ದು, ಬರ ಪರಿಹಾರದ ಹಣವನ್ನು ಸಾಲಕ್ಕೆ ಜಮೆ ಮಾಡದಂತೆ ನಿರ್ದೇಶನ ನೀಡಿದ್ದಾರೆ.

ರಾಜ್ಯ ಸರ್ಕಾರವು 2023-24 ನೇ ಸಾಲಿಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿದ್ದು, ಈವರೆಗೆ 79,839 ರೈತರಿಗೆ 34.94 ಕೋಟಿ ಹಣವನ್ನು ಡಿಬಿಟಿ ಮೂಲಕ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಿದೆ. ಆದರೆ ಜಮೆಯಾದ ಹಣವನ್ನು ಬ್ಯಾಂಕುಗಳಲ್ಲಿ ರೈತರ ಸಾಲಗಳಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದಾಗಿ ದೂರುಗಳು ಬರುತ್ತಿದೆ, ಇದು ಸರಿಯಾದ ಬೆಳವಣಿಗೆಯಲ್ಲ ಎಂದು ಅವರು ತಿಳಿಸಿದ್ದಾರೆ.

ಪ್ರಸ್ತುತ ಜಿಲ್ಲೆಯ ರೈತರು ತೀವು ಬರದಿಂದಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಸದರಿ ಬರ ಪರಿಹಾರದ ಹಣವನ್ನು ರೈತರ ಯಾವುದೇ ಸಾಲಕ್ಕೆ ಹೊಂದಾಣಿಕೆ ಮಾಡದೆ ರೈತರಿಗೆ ಬರ ಪರಿಹಾರದ ಹಣವನ್ನು ನೀಡುವಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್ ಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ