Sunday, November 22, 2026

ಪ್ರಾಯೋಗಿಕ ಆವೃತ್ತಿ

ಮೈಸೂರು| ಕೌಟುಂಬಿಕ ಕಲಹಕ್ಕೆ ಮಹಿಳೆ ಬಲಿ

ಕೌಟುಂಬಿಕ ಕಲಹದಿಂದ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬನ್ನೂರು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಟಿ.ನರಸೀಪುರ ತಾಲ್ಲೂಕಿನ ಬನ್ನೂರಿನ ತುರಗನೂರಿನ ನಿವಾಸಿ, ಕಾಂಗ್ರೆಸ್‌‍ ಮುಖಂಡರಾದ ವಿದ್ಯಾ ಕೊಲೆಯಾಗಿರುವ ಮಹಿಳೆ.

ಮೈಸೂರಿನ ಶ್ರೀರಾಂಪುರ ನಿವಾಸಿ ವಿದ್ಯಾ ಅವರು ನಂದೀಶ್‌ ಅವರನ್ನು ವಿವಾಹವಾಗಿದ್ದರು. ಇಬ್ಬರು ಮಕ್ಕಳಿದ್ದಾರೆ. ಕಾಂಗ್ರೆಸ್‌‍ ಪಕ್ಷದ ಮೈಸೂರು ನಗರ ಪ್ರಧಾನ ಕಾರ್ಯದರ್ಶಿಯಾಗಿ, ಬ್ಲಾಕ್‌ ಕಾಂಗ್ರೆಸ್‌‍ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಹಲವಾರು ಕನ್ನಡ ಚಿತ್ರಗಳಲ್ಲೂ ನಟಿಸಿದ್ದಾರೆ. ದಂಪತಿ ನಡುವೆ ಸಾಮರಸ್ಯ ಇರಲಿಲ್ಲವೆಂದು ತಿಳಿದುಬಂದಿದೆ.

ಆರೋಪಿ ನಂದೀಶ್‌, ಪತ್ನಿಯನ್ನು ಹತ್ಯೆಗೈದು ಪರಾರಿಯಾಗಿದ್ದಾನೆ. ನಿನ್ನೆ ತಡರಾತ್ರಿ ಬನ್ನೂರಿನ ತುರಗನೂರಿನಲ್ಲಿದ್ದ ಪತಿ ಮನೆಗೆ ವಿದ್ಯಾ ತೆರಳಿದ್ದಾರೆ. ದಂಪತಿ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ಪತ್ನಿ ತಲೆಗೆ ನಂದೀಶ್ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ