Friday, September 20, 2024

ಪ್ರಾಯೋಗಿಕ ಆವೃತ್ತಿ

ದಕ್ಷಿಣ ಶಿಕ್ಷಕರ ಕ್ಷೇತ್ರ| ಎನ್.ಡಿ.ಎ ಅಭ್ಯರ್ಥಿ ಬೆಂಬಲಿಸಲು ಕೆ.ಟಿ.ಶ್ರೀಕಂಠೇಗೌಡ ಮನವಿ

ಶಿಕ್ಷಕರು ಮತ್ತು ಪದವೀಧರ ಶಿಕ್ಷಕರ ಪರವಾಗಿ ಜೆಡಿಎಸ್ ಬಿಜೆಪಿ ಪಕ್ಷಗಳು ಸಾಕಷ್ಟು ಕೆಲಸ ಮಾಡಿರುವುದರಿಂದ ದಕ್ಷಿಣ ಪದವೀಧರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ವಿವೇಕಾನಂದ ಅವರಿಗೆ ಮೊದಲ ಪ್ರಾಶಸ್ತ್ಯ ಮತಗಳನ್ನು ನೀಡುವುದರ ಮೂಲಕ ತಮ್ಮ ಸೇವೆಗೆ ಅವಕಾಶ ಮಾಡಿಕೊಡುವಂತೆ ವಿಧಾನ ಪರಿಷತ್ ಮಾಜಿ ಸದಸ್ಯ ಕೆ ಟಿ ಶ್ರೀಕಂಠೇಗೌಡ ಮನವಿ ಮಾಡಿದರು.

ಕೆ.ಆರ್.ಪೇಟೆ ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣಾ ಅಂಗವಾಗಿ ಚುನಾವಣಾ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತ ಗೊಂಡಿದ್ದು ಕಳೆದ ಒಂದು ವರ್ಷಗಳಿಂದ ರಾಜ್ಯ ಅಭಿವೃದ್ಧಿಯಲ್ಲಿ ತೀವ್ರ ಹಿಂದುಳಿದಿದೆ ಎಂದರು.

ನಮ್ಮ ಪಕ್ಷದಿಂದ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಅಧಿಕಾರ ‌ಅನುಭವಿಸಿ ಪಕ್ಷಕ್ಕೆ ದ್ರೋಹ ಬಗೆದು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಅವರಿಗೆ ತಕ್ಕಪಾಠ ಕಲಿಸಬೇಕು. ನಾನೆಂದೂ‌ ಪಕ್ಷಕ್ಕೆ ದ್ರೋಹವನ್ನು ಮಾಡುವುದಿಲ್ಲ. ನಮ್ಮ ಪಕ್ಷದ ಪರಮೋಚ್ಚ ನಾಯಕ ಮಾಜಿ‌ ಪ್ರಧಾನಿ ದೇವೇಗೌಡರು ಹಾಗೂ ಮಾಜಿ‌ ಮುಖ್ಯಮಂತ್ರಿ ಕುಮಾರಣ್ಣ,ಯಡಿಯೂರಪ್ಪ ಅವರ ಅಪಾರ ಗೌರವವನ್ನು ಇಟ್ಟುಕೊಂಡಿದ್ದೇನೆ.ಈ ಚುನಾವಣೆಯಲ್ಲಿ ‌ಎನ್ ಡಿ ಎ ಅಭ್ಯರ್ಥಿ ವಿವೇಕಾನಂದ ಅವರು ಗೆದ್ದರೆ ನಾನು ಗೆದ್ದಂತೆ. ಆದ್ದರಿಂದ ಆಶೀರ್ವದಿಸುವಂತೆ ಮನವಿ ಮಾಡಿದರು.

ಶಾಸಕ ಹೆಚ್ ಟಿ ಮಂಜು ಮಾತನಾಡಿ, ನಮ್ಮ ಎರಡು ಪಕ್ಷಗಳಾದ ಜೆಡಿಎಸ್ ಬಿಜೆಪಿ ಅಭ್ಯರ್ಥಿ ವಿವೇಕಾನಂದ ಅವರು ಮಾಜಿ‌ ವಿಧಾನ ಪರಿಷತ್ ಸದಸ್ಯರಾದ ಕೆ ಟಿ ಶ್ರೀಕಂಠೆಗೌಡರ ಆಶೀರ್ವಾದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ವಿವೇಕಾನಂದ ಅವರನ್ನು ಗೆಲ್ಲಿಸಬೇಕು. ಸೌಮ್ಯ ಸ್ವಭಾವದ ವ್ಯಕ್ತಿ ವಿವೇಕಾನಂದ ಅವರನ್ನು ಎರಡು ಪಕ್ಷಗಳ ನಾಯಕರು ಸೇರಿ ‌ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಪ್ರಯೋಜನವಿಲ್ಲ. ಈ‌ ಬಾರಿ ದಕ್ಷಿಣ ಪದವೀಧರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ವಿವೇಕಾನಂದ ಅವರಿಗೆ ಆಶೀರ್ವಾದ ಮಾಡುವಂತೆ ಪೂರ್ವ ಭಾವಿಸಭೆಯಲ್ಲಿ‌ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಘಟಕದ ತಾಲ್ಲೂಕು ಅಧ್ಯಕ್ಷ ಜಾನಕೀರಾಂ, ಹಿರಿಯ ಮುಖಂಡ ರಾಜೇನಹಳ್ಳಿ ಕುಮಾರಸ್ವಾಮಿ,ನಿವೃತ್ತ ಪ್ರಾಂಶುಪಾಲ ಮಂಚೇಗೌಡ, ಕಾಲೇಜು ಪ್ರಾಂಶುಪಾಲ ಸಂಘದ ಅಧ್ಯಕ್ಷ ಸತ್ಯ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಶಿವರಾಮೇಗೌಡ, ರವಿ ಸೇರಿದಂತೆ ಶಿಕ್ಷಣ ಕ್ಷೇತ್ರದ ಇತರೆ ವಿಭಾಗದ ಪದಾಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!