Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಇಂಡಿಯಾ ಒಕ್ಕೂಟದ ವಿರುದ್ದ ಬಿಜೆಪಿ ಪ್ರತಿಭಟನೆ

ಪಶ್ಚಿಮ ಬಂಗಾಳದಲ್ಲಿ ಹಿಂದುಳಿದ ವರ್ಗದ ಮೀಸಲಾತಿಯನ್ನು ಮುಸ್ಲಿಂರಿಗೆ ನೀಡಲು ಮುಂದಾಗಿರುವುದನ್ನು ಖಂಡಿಸಿ ಭಾರತೀಯ ಜನತಾ ಪಕ್ಷ ಕಾರ್ಯಕರ್ತರು ಬುಧವಾರ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.

ಮಂಡ್ಯನಗರದ ಸಂಜಯ ವೃತ್ತದಿಂದ ಮೆರವಣಿಗೆ ಹೊರಟ ಪಕ್ಷದ ಕಾರ್ಯಕರ್ತರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇಂಡಿಯಾ ಒಕ್ಕೂಟದ ವಿರುದ್ಧ ಘೋಷನೆ ಕೂಗಿದರು.

ಹಿಂದುಳಿದ ವರ್ಗದ ಮೀಸಲಾತಿಯನ್ನು ಕಸಿದು ಧರ್ಮದ ಹೆಸರಿನಲ್ಲಿ ಮುಸ್ಲಿಂರಿಗೆ ನೀಡಲು ಟಿಎಂಸಿ ಮುಂದಾಗಿದೆ. ಹಿಂದುಳಿದ ವರ್ಗದವರ ಮೀಸಲಾತಿ ಸಂವಿಧಾನ ಬದ್ಧ ಹಕ್ಕಾಗಿದ್ದು ಇದನ್ನು ಕಸಿಯುವ ಪ್ರಯತ್ನವನ್ನು ಬಿಜೆಪಿ ಪಕ್ಷ ವಿರೋಧಿಸಲಿದೆ, ಕರ್ನಾಟಕದಲ್ಲಿಯೂ ಕಾಂಗ್ರೆಸ್ ಸರ್ಕಾರ ಇದೇ ಮಾದರಿಯ ಮೀಸಲಾತಿಯನ್ನು ತರಲು ಯೋಜನೆ ರೂಪಿಸಿದೆ, ಹಾಗೊಮ್ಮೆ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಸಿದು ಮುಸ್ಲಿಮರಿಗೆ ನೀಡಿದರೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಜಾತಿಗಳಿಗೆ ಅನ್ಯಾಯವಾಗಲಿದೆ ಎಂದು ದೂರಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಡಾ.ಸಿದ್ದರಾಮಯ್ಯ, ಅಶೋಕ್ ಜಯರಾಂ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿವೇಕ್, ಆನಂದ್,ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಕೆ ಆರ್ ನರಸಿಂಹಾಚಾರ್, ಮೈಷುಗರ್ ಮಾಜಿ ಅಧ್ಯಕ್ಷ ಶಿವಲಿಂಗೇಗೌಡ ಸೇರಿದಂತೆ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ