Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮತ ಎಣಿಕೆಗೆ ಸಿದ್ದತೆ; ಜಿಲ್ಲಾಧಿಕಾರಿ ಪರಿಶೀಲನೆ

ಮಂಡ್ಯ ಲೋಕಸಭಾ ಚುನಾವಣೆಯ ಮತ ಎಣಿಕೆಯು ಜೂ.4ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ  ಜಿಲ್ಲಾಡಳಿತ ಅಗತ್ಯ ಸಿದ್ದತಾ ಕ್ರಮವನ್ನು ಕೈಗೊಂಡಿದ್ದು, ಗುರುವಾರ ಜಿಲ್ಲಾಧಿಕಾರಿ ಡಾ.ಕುಮಾರ ಪರಿಶೀಲನೆ ನಡೆಸಿದರು.

ಮಂಡ್ಯ ವಿಶ್ವವಿದ್ಯಾಲಯದ ಸ್ಟ್ರಾಂಗ್ ರೂಂಗಳಲ್ಲಿ ಇವಿಎಂ ಮತಪೆಟ್ಟಿಗೆಗಳನ್ನು ಇಡಲಾಗಿದ್ದು, ಅಗತ್ಯ ಭದ್ರತೆ ಒದಗಿಸಲಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರ 8 ವಿಧಾನಸಭಾ ಕ್ಷೇತ್ರಗಳ ಮತ ಪೆಟ್ಟಿಗೆಗಳನ್ನು ಸ್ಟ್ರಾಂಗ್ ರೂಂಗಳಲ್ಲಿ ಭದ್ರಪಡಿಸಲಾಗಿದ್ದು, ಜೂ.4ರಂದು ಬೆಳಿಗ್ಗೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಎಲ್ಲರಲ್ಲೂ ಕುತೂಹಲ ಕೆರಳಿಸಿದೆ.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್‌ ನಾಗರಾಜು, ಚುನಾವಣಾ ತಹಶೀಲ್ದಾರ್ ವೆಂಕಟಾಚಲಪತಿ, ದೀಪಕ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ