Thursday, November 19, 2026

ಪ್ರಾಯೋಗಿಕ ಆವೃತ್ತಿ

ಎಂಎಲ್ಸಿ ಸ್ಥಾನಕ್ಕೆ ಸುಮಲತಾ ಅಂಬರೀಶ್ ಹೆಸರು‌ ಫೈನಲ್

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಂತರ ಗೆದ್ದು ಬಿಜೆಪಿಗೆ ಬೆಂಬಲ ನೀಡಿದ್ದ ಸುಮಲತಾ ಅವರಿಗೆ 2024 ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕಾರಣದಿಂದ ಬಿಜೆಪಿ ಟಿಕೆಟ್‌ ನೀಡಲು ಸಾಧ್ಯವಾಗಿರಲಿಲ್ಲ.

ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿ-ಜೆಡಿಎಸ್ ಮೈತ್ರಿ ಕಾರಣದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬಿಟ್ಟು ಕೊಟ್ಟ ಕಾರಣಕ್ಕೆ ಸುಮಲತಾ ಅವರಿಗೆ ಎಂಎಲ್ಸಿ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ಮುಂದಾಗಿದ್ದು, ಅವರಿಗೆ ಎಂಎಲ್ಸಿ ಸ್ಥಾನ ಖಚಿತವೆಂದು ದೆಹಲಿ ಮೂಲಗಳು ಸ್ಪಷ್ಟ ಪಡಿಸಿವೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ