Friday, November 20, 2026

ಪ್ರಾಯೋಗಿಕ ಆವೃತ್ತಿ

ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರಧಾನ

ಆಧುನಿಕ ಮೈಸೂರು ರಾಜ್ಯ ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ಅಂತರಾಷ್ಟ್ರೀಯ ಅಲಯನ್ಸ್ ಸಂಸ್ಥೆ ನಿರ್ದೇಶಕ ಡಾ.ನಾಗರಾಜ ವಿ.ಭೈರಿ ಅಭಿಪ್ರಾಯಪಟ್ಟರು.

ನಗರದಲ್ಲಿರುವ ರೆಡ್ ಕ್ರಾಸ್ ಭವನದಲ್ಲಿ ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್, ನಂಜಮ್ಮ ಮೋಟೆಗೌಡ ಚಾರಿಟಬಲ್ ಟ್ರಸ್ಟ್ ಕೊಪ್ಪ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಡ್ಯ ಜಿಲ್ಲಾ ಶಾಖೆ, ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ಮಂಡ್ಯ ಇವರ ಸಹಯೋಗದಲ್ಲಿ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ೧೪೦ನೇ ಜನ್ಮದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇಡೀ ಜಗತ್ತೇ ಮೈಸೂರು ರಾಜ್ಯದ ಕಡೆಗೆ ಮುಖ ಮಾಡುವಂತೆ ಮಾಡಿದ ಮಹಾರಾಜರು ಇದ್ದರೆ ಅದು ನಾಲ್ವಡಿ ಕೃಷ್ಣರಾಜ ಒಡೆಯರ್. ಮೈಸೂರು ಪ್ರಾಂತ್ಯ ಆಡಳಿತದ ಅವಧಿಯಲ್ಲಿ ಆಧುನಿಕತೆಯ ಸುವರ್ಣ ಯುಗ ಎಂದರೂ ತಪ್ಪಾಗದು, ಸಮಗ್ರ ಅಭಿವೃದ್ಧಿಯ ಬಗ್ಗೆ ಯೋಚಿಸಿದ ಮಹಾನ್ ವ್ಯಕ್ತಿತ್ವದ ವ್ಯಕ್ತಿ ಎಂದು ಸ್ಮರಿಸಿದರು.

ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು, ಶಿಕ್ಷಣ ,ನೀರಾವರಿ, ವಿಜ್ಞಾನ, ಕೈಗಾರಿಕೆ ,ಮಹಿಳಾ ಶಿಕ್ಷಣ,ಸಾಹಿತ್ಯ, ರಾಜಕೀಯ, ಹಿಂದುಳಿದ ಹಾಗೂ ಬಡ ಜನರ ಬಗ್ಗೆ ಸಂವೇದನಾಶೀಲರಾಗಿ ಚಿಂತಿಸಿ ಪ್ರಗತಿಪರ ನಿರ್ಧಾರಗಳನ್ನು ಕೈಕೊಂಡು ಇತಿಹಾಸದಲ್ಲಿ ಮರೆಯಲಾಗದ ಮಹಾರಾಜರಾಗಿದ್ದಾರೆ ನುಡಿದರು.

ಮೈಸೂರು ಸಂಸ್ಥಾನದ ಅಂದಿನ ರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅಂದೇ ಸ್ವಾತಂತ್ರ ಬಂದ ಮೇಲೆ ಪ್ರಜಾಪ್ರಭುತ್ವ ಹೇಗಿರಬೇಕು ಎಂಬುದನ್ನು ದೇಶಕ್ಕೆ ತಿಳಿಸಿಕೊಟ್ಟವರು. ಜನಪರ ಕೆಲಸಗಳನ್ನು ಮಾಡಿ ತೋರಿಸಿಕೋಟ್ಟಿದ್ದಾರೆ ಅವರ ದಾರಿಯಲ್ಲಿ ಇಂದಿನ ರಾಜಕರಣಿಗಳು ನಡೆದುಕೊಂಡರೆ ಸಾಕು ಎಂದು ಸಲಹೆ ನೀಡಿದರು.

ಅಲಯನ್ಸ್ ಸಂಸ್ಥೆ ಎಂದರೆ ಒಕ್ಕೂಟ ಎಂದು ಅರ್ಥ, ಅಲಯನ್ಸ್ ಸಂಸ್ಥೆ ನಮ್ಮ ಭಾರತದೇಶದಲ್ಲಿ ಹುಟ್ಟಿ ಬೆಳೆದು ವಿಶ್ವದ 100ಕ್ಕೂ ಹೆಚ್ಚು ರಾಷ್ಟಗಳಲ್ಲಿ ಸೇವಾಕಾರ್ಯಗಳನ್ನು ಮಾಡುತ್ತಿದೆ, ಇಲ್ಲಿ ಯಾವುದೇ ಆರ್ಥಿಕ ಹೊರೆ ಏರುವುದಿಲ್ಲ, ಸೇವಾಕಾರ್ಯಗಳ ಮೂಲಕ ನಾಯಕತ್ವ ಬೆಳೆಸಿಕೊಳ್ಳುವುದಾಗಿದೆ ಎಂದು ತಿಳಿಸಿದರು.

ಬಳಿಕ ಮಾತನಾಡಿದ ಅಲಯನ್ಸ್ ಸಂಸ್ಥೆ ಜಿಲ್ಲಾ ರಾಜ್ಯಪಾಲ ಕೆ.ಟಿ ಹನುಮಂತು, ಹತ್ತಾರು ವರ್ಷಗಳ ಬಹು ಬೇಡಿಕೆ ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಬಳಿ ನಾಲ್ವಡಿ ಅವರ ಪ್ರತಿಮೆ ನಿರ್ಮಾಣವಾಗಬೇಕಿದರುವುದು, ಇನ್ನೂ ಆಗಿಲ್ಲ, ಸುಮಾರು ೨ಕೋಟಿ ಹಣ ಇದೆ ಎಂದು ತಿಳಿದು ಬಂದಿದೆ, ಆದರೆ ಕಾರ್ಯರೂಪಕ್ಕೆ ಬಂದಿಲ್ಲ, ಎಲ್ಲರೂ ಒತ್ತಾಯಿಸಿಸೋಣ ಎಂದರು.

ಸೇವಾ ಕ್ಷೇತ್ರದಲ್ಲಿ ಸೇವಾಕಿರಣ ಟ್ರಸ್ಟ್ನ ಕಾರ್ಯದಶಿ ಜಿ.ವಿ.ನಾಗರಾಜು ಅವರ ಪಾತ್ರ ಅಪಾರವಿದೆ, ಸಂಘಟನೆ, ಸೇವೆ, ಸಾಹಿತ್ಯ, ನಿರಾಶ್ರಿತರಿಗೆ ಆಸರೆಯಾಗುವುದು ಇವರ ಪ್ರಮುಖ ಧ್ಯೇಯವಾಗಿದೆ, ಇಂದು ನಾವು ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನಲ್ಲಿ 4ನೇ ವರ್ಷದ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದ್ಧೇವೆ ಎಂದರು.

ರಾಜ್ಯದಲ್ಲಿ ದೂರದೃಷ್ಟಿಯ ಅನೇಕ ಯೋಜನೆಗಳು ಜಾರಿಗೆ ಬರಲು ಕಾರಣವಾಯಿತು. ಮೈಸೂರು ಗ್ರಾಮ ನ್ಯಾಯಾಲಯ ಕಾಯ್ದೆ ದೇವದಾಸಿ ಪದ್ಧತಿ ನಿಷೇಧ, ಬಸವಿ ಪದ್ಧತಿ ರದ್ದತಿ, ವೇಶ್ಯಾವೃತ್ತಿ ತಡೆಗಟ್ಟುವ ಕಾಯ್ದೆಯ ಜಾರಿ, ಗೆಜ್ಜೆಪೂಜೆ ನಿರ್ಮೂಲನೆ, ವಿಧವೆಯರಿಗೆ ಮರುವಿವಾಹ ಮಾಡಿಕೊಳ್ಳುವ ಕಾಯ್ದೆಯ ಜಾರಿ, ಸ್ತ್ರೀಯರಿಗೆ ಕಡ್ಡಾಯ ಶಿಕ್ಷಣ ಜಾರಿ, ಮೀಸಲಾತಿಯಂತಹ ಕ್ರಾಂತಿಕಾರಿ ಕಾನೂನುಗಳನ್ನು ಜಾರಿಗೆ ತಂದರು ಎಂದು ಸ್ಮರಿಸಿದರು.

ಜಾಹೀರಾತು: ಮಹಿಳಾ ಕ್ಯಾನ್ಸರ್ ರೋಗಿಗಳಿಗೆ ಉಚಿತ ಸಮಾಲೋಚನೆ ಸದುಪಯೋಗ ಪಡಿಸಿಕೊಳ್ಳಿ

ಇದೇ ಸಂಧರ್ಭದಲ್ಲಿ ಸೇವಾಕಿರಣ ವೃದ್ಧಾಶ್ರಮದ ಕಾರ್ಯದರ್ಶಿ ಜಿ.ವಿ.ನಾಗರಾಜ್ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು. ಬಳಿಕ ಗೀತಗಾಯನ ನಡೆಯಿತು.

ವೇದಿಕೆಯಲ್ಲಿ ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ಅಧ್ಯಕ್ಷ ಪ್ರೊ. ಡೇವಿಡ್, ಸೇವಾಕಿರಣ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಶಿವಾನಂದ, ಅಲಯನ್ಸ್ ಸಂಸ್ಥೆಯ 1ನೇ ಉಪರಾಜ್ಯಪಾಲ ಎಚ್. ಮಾದೇಗೌಡ, 2ನೇ ಉಪ ರಾಜ್ಯಪಾಲ ಕೆ.ಆರ್ ಶಶಿಧರ ಈಚೆಗೆರೆ, ಜಿಲ್ಲಾ ರಾಯಭಾರಿ ಮಂಜುನಾಥ್, ನೀನಾ ಪಟೇಲ್, ಜಲಜಾಕ್ಷಿ, ಆರ್ ಮಹೇಶ್, ಎಂ ಲೋಕೇಶ್, ಪ್ರಮೀಳಾಪುಮಾರಿ, ಮಹಾಲಕ್ಷ್ಮಿ ನಾರಾಯಣಸ್ವಾಮಿ ಮತ್ತಿತರರು ಇದ್ದರು.

ಮಂಡ್ಯ ನಗರದಲ್ಲಿರುವ ರೆಡ್ ಕ್ರಾಸ್ ಭವನದಲ್ಲಿ ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್, ನಂಜಮ್ಮ ಮೋಟೆಗೌಡ ಚಾರಿಟಬಲ್ ಟ್ರಸ್ಟ್ ಕೊಪ್ಪ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಡ್ಯ ಜಿಲ್ಲಾ ಶಾಖೆ, ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ಮಂಡ್ಯ ಇವರ ಸಹಯೋಗದಲ್ಲಿ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ೧೪೦ನೇ ಜನ್ಮದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಅಂತರಾಷ್ಟಿçÃಯ ಅಲಯನ್ಸ್ ಸಂಸ್ಥೆ ನಿರ್ದೇಶಕ ಡಾ.ನಾಗರಾಜ ವಿ.ಭೈರಿ ಚಾಲನೆ ನೀಡಿದರು.

ಮಂಡ್ಯ ನಗರದಲ್ಲಿರುವ ರೆಡ್ ಕ್ರಾಸ್ ಭವನದಲ್ಲಿ ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್, ನಂಜಮ್ಮ ಮೋಟೆಗೌಡ ಚಾರಿಟಬಲ್ ಟ್ರಸ್ಟ್ ಕೊಪ್ಪ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಡ್ಯ ಜಿಲ್ಲಾ ಶಾಖೆ, ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ಮಂಡ್ಯ ಇವರ ಸಹಯೋಗದಲ್ಲಿ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 140ನೇ ಜನ್ಮದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸೇವಾಕಿರಣ ಚಾರಿಟಲ್ ಟ್ರಸ್ಟ್ ಕಾರ್ಯದರ್ಶಿ ಜಿ.ವಿ.ನಾಗರಾಜ್ ಅವರಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ