Friday, September 20, 2024

ಪ್ರಾಯೋಗಿಕ ಆವೃತ್ತಿ

ಲೋಕಸಭೆ ಚುನಾವಣೆ| ರಾಯ್‌ಬರೇಲಿ- ವಯನಾಡು ಎರಡರಲ್ಲೂ ರಾಹುಲ್ ಗಾಂಧಿ ಮುನ್ನಡೆ

ಕಾಂಗ್ರೆಸ್‌ ನಾಯಕ, ವಯನಾಡು ಸಂಸದ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಮತ್ತು ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಎರಡೂ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ.

ಈ ಹಿಂದೆ ಸೋನಿಯಾ ಗಾಂಧಿ 2004ರಿಂದ 2019ರವರೆಗೆ ತನ್ನ ತೆಕ್ಕೆಯಲ್ಲಿ ಉಳಿಸಿಕೊಂಡಿರುವ ರಾಯ್‌ಬರೇಲಿಯಲ್ಲಿ ಈ ಬಾರಿ ರಾಹುಲ್ ಗಾಂಧಿ ಸ್ಪರ್ಧಿಸಿದ್ದು ಕಾಂಗ್ರೆಸ್ ಭದ್ರಕೋಟೆಯಾಗಿರುವ ಈ ಕ್ಷೇತ್ರವನ್ನು ಉಳಿಸಿಕೊಳ್ಳುವ ಹೊಣೆ ಹೊತ್ತಿದ್ದಾರೆ.

“>

ಆರಂಭಿಕವಾಗಿ ರಾಹುಲ್ ಗಾಂಧಿ ವಯನಾಡು ಮತ್ತು ರಾಯ್‌ಬರೇಲಿ ಎರಡೂ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದು, 9 ಗಂಟೆ ವೇಳೆಗೆ ರಾಯ್‌ಬರೇಲಿಯಲ್ಲಿ 2126 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದರು. ವಯನಾಡಿನಲ್ಲಿ 8718 ಮತಗಳ ಮುನ್ನಡೆ ಸಾಧಿಸಿದ್ದರು.

ಸದ್ಯ ರಾಹುಲ್ ಗಾಂಧಿ ರಾಯ್‌ಬರೇಲಿಯಲ್ಲಿ 50,589 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ. ರಾಹುಲ್‌ 1,01,481 ಮತಗಳನ್ನು ಗಳಿಸಿದ್ದರೆ, ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ 50,892 ಮತಗಳನ್ನು ಗಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಾರಾಣಾಸಿಯಲ್ಲಿ ಹಿನ್ನೆಡೆ ಸಾಧಿಸಿದ್ದು ಟ್ವಿಟ್ಟರ್‌ನಲ್ಲಿ ಮುಂದಿನ ಪ್ರಧಾನಿ ರಾಹುಲ್ ಗಾಂಧಿ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!