Thursday, September 19, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ| ಪರಿಸರ ಸಂರಕ್ಷಣೆ ಎಲ್ಲರ ಹೊಣೆ: ಡಾ. ಮಂಜುನಾಥ್

ಸಮಾಜ ಆರೋಗ್ಯಕರವಾಗಿರಬೇಕಾದರೆ ಪರಿಸರ ಮತ್ತು ಪ್ರಕೃತಿ ರಕ್ಷಣೆ ಬಹಳ ಮುಖ್ಯ.ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ ಎಂದರಿತು, ಪರಿಸರವನ್ನು ನಾವು ಕಾಪಾಡಿದರೆ ಪರಿಸರ ನಮ್ಮನ್ನು ಕಾಪಾಡುತ್ತದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಡಿ.ಟಿ. ಮಂಜುನಾಥ ಹೇಳಿದರು.

ಶ್ರೀರಂಗಪಟ್ಟಣ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಗಿಡ ನೆಟ್ಟು “ವಿಶ್ವ ಪರಿಸರ ದಿನ” ಉದ್ಘಾಟಿಸಿ ಮಾತನಾಡಿದರು.

ಕೋವಿಡ್ ಸಾಂಕ್ರಾಮಿಕ ರೋಗ ಮನುಕುಲವನ್ನು ಕಾಡಿದ ಸಂದರ್ಭದಲ್ಲಿ ಆಮ್ಲಜನಕದ ಕೊರತೆ ಕಾಡಿದ್ದನ್ನು ಎಲ್ಲರೂ ನೋಡಿದ್ದೇವೆ.ಆ ಕಷ್ಟವನ್ನು ಅನುಭವಿಸಿದ್ದೇವೆ. ಆದ್ದರಿಂದ ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್ ಪರಿಸರ ಸಂರಕ್ಷಣೆ ಕುರಿತಾಗಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಸದರಿ ವೇಳೆ ತಾಲ್ಲೂಕಿನ ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳು,ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!