Thursday, November 19, 2026

ಪ್ರಾಯೋಗಿಕ ಆವೃತ್ತಿ

ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಮೋದಿ ಟೀಂ‌ ಸೇರುವ ಸಾಧ್ಯತೆ

ತಮಿಳುನಾಡಿನ  ಚುನಾವಣೆಯಲ್ಲಿ ಸೋತಿರುವ ರಾಜ್ಯಾಧ್ಯಕ್ಷ  ಅಣ್ಣಾಮಲೈ ಅವರನ್ನು ಮೋದಿ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ತಮಿಳುನಾಡಿನಲ್ಲಿ ಚುನಾವಣೆಯಲ್ಲಿ ಸೋತಿದ್ದರು ಸಹ ಬಿಜೆಪಿ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಅಣ್ಣಾಮಲೈ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಾರೆ ಎಂದು ತಿಳಿದುಬಂದಿದೆ.

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಭಾನುವಾರ ರಾಜ್ಯ ಸಚಿವರಾಗಿ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ಭವನದಲ್ಲಿ ಇಂದು ಸಚಿವ ಸಂಪುಟದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿರುವ ನಾಯಕರ ಬಗ್ಗೆ ಊಹಾಪೋಹಗಳು ಹೆಚ್ಚುತ್ತಿವೆ. ಅಣ್ಣಾಮಲೈ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡ ನಂತರ ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಬೇರೆಯವರಿಗೆ ವಹಿಸುವ ಸಾಧ್ಯತೆ ಇದೆ.

39 ವರ್ಷದ ಮಾಜಿ IPS ಅಧಿಕಾರಿ ಅಣ್ಣಾಮಲೈ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಕೊಯಮತ್ತೂರು ಕ್ಷೇತ್ರದಿಂದ ದ್ರಾವಿಡ ಮುನ್ನೇತ್ರ ಕಳಗಂ (DMK) ನ ಗಣಪತಿ ರಾಜ್‌ಕುಮಾರ್‌ಗೆ ಪ್ರತಿಸ್ಪರ್ಧಿಯಾಗಿ ಸೋತರು. ಅಣ್ಣಾಮಲೈ 2019 ರಲ್ಲಿ ಬಿಜೆಪಿ ಸೇರಿದರು ಮತ್ತು 2021 ರಲ್ಲಿ ಬಿಜೆಪಿ ಪಕ್ಷದ ತಮಿಳುನಾಡು 39 ವರ್ಷದ ಮಾಜಿ IPS ಅಧಿಕಾರಿ ಅಣ್ಣಾಮಲೈ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಕೊಯಮತ್ತೂರು ಕ್ಷೇತ್ರದಿಂದ ದ್ರಾವಿಡ ಮುನ್ನೇತ್ರ ಕಳಗಂ (DMK) ನ ಗಣಪತಿ ರಾಜ್‌ಕುಮಾರ್‌ಗೆ ಪ್ರತಿಸ್ಪರ್ಧಿಯಾಗಿ ಸೋತರು. ಅಣ್ಣಾಮಲೈ 2019 ರಲ್ಲಿ ಬಿಜೆಪಿ ಸೇರಿದರು ಮತ್ತು 2021ರಲ್ಲಿ ಬಿಜೆಪಿ ಪಕ್ಷದ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರಾದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ