ಶ್ರೀನಗರ: ಶಂಕಿತ ಭಯೋತ್ಪಾದಕ ದಾಳಿಯ ನಂತರ ಭಾನುವಾರ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಸಾಗಿಸುತ್ತಿದ್ದ ಬಸ್ ಆಳವಾದ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 9 ಜನರು ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ.
ಶಿವ ಖೋರಿ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್, ಪೋನಿ ಪ್ರದೇಶದ ತೆರ್ಯಾತ್ ಗ್ರಾಮದಲ್ಲಿ ದಾಳಿಗೆ ಒಳಗಾಗಿದೆ. ಬಸ್ ಶಿವ ಖೋರಿ ಗುಹಾಂತರ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ದಾಳಿ ನಡೆದಿದೆ. ಭಯೋತ್ಪಾದಕರು ಗುಂಡಿನ ದಾಳಿ ನಡೆಸುತ್ತಿದ್ದಂತೆ ಬಸ್ ಕಮರಿಗೆ ಬಿದ್ದಿದೆ. ಎಂದು ಅಧಿಕಾರಿಗಳು ಆರಂಭಿಕ ವರದಿಗಳನ್ನು ಉಲ್ಲೇಖಿಸಿದ್ದಾರೆ.
ಬಸ್ಸಿನ ಮೇಲೆ ಹಲವು ಬಾರಿ ದಾಳಿ ನಡೆಸಲಾಗಿದ್ದು, ಸ್ಥಳದಲ್ಲಿ ಹಲವಾರು ಖಾಲಿ ಗುಂಡುಗಳು ಕೂಡ ಸ್ಥಳದಲ್ಲಿ ಪತ್ತೆಯಾಗಿವೆ.
आप सभी से अनुरोध है इस Hashtag के साथ जम्मू-कश्मीर में हुए आंतकी हमले पर ज्यादा से ज्यादा Tweet करें 🙏#AllEyesOnReasi#TerroristAttack pic.twitter.com/qj3OtqU5UG
— 𝕏𝙎𝙄𝙈𝘽𝘼🚩 (@iamXsimba_) June 9, 2024
“>
ದಾಳಿಯಿಂದಾಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಬಿದ್ದಿದೆ. ರಕ್ಷಣಾ ಕಾರ್ಯಾಚರಣೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಇತರ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಪ್ರದೇಶವನ್ನು ಸುತ್ತುವರಿದಿದೆ.
ಎಸ್ಎಸ್ಪಿ ರಿಯಾಸಿ ಮೋಹಿತಾ ಶರ್ಮಾ, “ಶಿವ್ ಖೋರಿಯಿಂದ ಕತ್ರಾಗೆ ಹೋಗುತ್ತಿದ್ದ ಪ್ರಯಾಣಿಕರ ಬಸ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ ಎಂದು ಪ್ರಾಥಮಿಕ ವರದಿಗಳು ಸೂಚಿಸುತ್ತವೆ. ಗುಂಡಿನ ದಾಳಿಯಿಂದಾಗಿ ಬಸ್ ಚಾಲಕನ ಸಮತೋಲನ ತಪ್ಪಿ ಬಸ್ ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ 33 ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಪ್ರಯಾಣಿಕರ ಗುರುತು ಇನ್ನೂ ದೃಢಪಟ್ಟಿಲ್ಲ, ಅವರು ಸ್ಥಳೀಯರಲ್ಲ. ಶಿವ ಖೋರಿ ದೇವಾಲಯವನ್ನು ಭದ್ರಪಡಿಸಲಾಯಿತು.
ಪರಿಸ್ಥಿತಿ ಪರಿಶೀಲಿನೆ :
ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಅವರನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವಂತೆ ತಿಳಿಸಿfದಾರೆ. X ಖಾತೆಯಲ್ಲಿ ಈ ಹೇಯ ಕೃತ್ಯದ ಹಿಂದೆ ಇರುವವರನ್ನು ಶೀಘ್ರದಲ್ಲೇ ಶಿಕ್ಷಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಈ ಭೀಕರ ದಾಳಿಯ ಅಪರಾಧಿಗಳನ್ನು ಬಿಡಲಾಗುವುದಿಲ್ಲ ಮತ್ತು ಕಾನೂನಿನ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ X ಖಾತೆಯಲ್ಲಿ ಹೇಳಿದ್ದಾರೆ. “J&K, ರಿಯಾಸಿಯಲ್ಲಿ ಯಾತ್ರಾರ್ಥಿಗಳ ಮೇಲೆ ನಡೆದ ದಾಳಿಯ ಘಟನೆಯಿಂದ ಆಳವಾದ ನೋವಾಗಿದೆ. ಲೆಫ್ಟಿನೆಂಟ್ ಗವರ್ನರ್ ಮತ್ತು ಡಿಜಿಪಿ, JK ಮತ್ತು ಘಟನೆಯ ಬಗ್ಗೆ ವಿಚಾರಿಸಿದೆ ಎಂದು ಬರೆದುಕೊಂಡಿದ್ದಾರೆ.
Deeply pained by the incident of the attack on pilgrims in Reasi, J&K. Spoke to the Lieutenant Governor and the DGP, J&K, and inquired about the incident. The culprits of this dastardly attack will not be spared and will face the wrath of the law.
The local administration is…— Amit Shah (Modi Ka Parivar) (@AmitShah) June 9, 2024
“>
ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
The attack on the bus carrying pilgrims in Reasi, Jammu and Kashmir is extremely reprehensible. My heart goes out to the families of those who have lost their loved ones in this heinous act against pilgrims. I also pray for the speedy recovery of the injured.
— Rajnath Singh (मोदी का परिवार) (@rajnathsingh) June 9, 2024
“>
ಕಾಂಗ್ರೆಸ್ ಪಕ್ಷವು ತಮ್ಮ ಅಧಿಕೃತ X ಖಾತೆಯಲ್ಲಿ ದುಃಖಿತ ಕುಟುಂಬಕ್ಕೆ ಸಂತಾಪ ಸೂಚಿಸಿದೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರು ರಿಯಾಸಿಯ ಯಾತ್ರಿಕರ ಬಸ್ ಮೇಲೆ ಉಗ್ರಗಾಮಿ ದಾಳಿಯನ್ನು X ನಲ್ಲಿ ಖಂಡಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎಲ್ಲಾ ಕುಟುಂಬಗಳಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಘಟನೆಯನ್ನು ‘ಹೇಡಿತನ’ ಎಂದು ಕರೆದಿರುವ ಅವರು, ಜಮ್ಮು ಮತ್ತು ಕಾಶ್ಮೀರದ ಆತಂಕಕಾರಿ ಭದ್ರತಾ ಪರಿಸ್ಥಿತಿಯ ನೈಜ ಚಿತ್ರಣವನ್ನು ಈ ಘಟನೆ ತೆರೆದಿಡುತ್ತದೆ ಎಂದು ತಮ್ಮ X ನಲ್ಲಿ ಹೇಳಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಜನರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿದರು ಮತ್ತು ಉದ್ದೇಶಪೂರ್ವಕವಾಗಿ ನಮ್ಮ ರಾಷ್ಟ್ರೀಯ ಭದ್ರತೆಯನ್ನು ಅವಮಾನಿಸಿದ್ದಾರೆ.
Even while PM, Shri Narendra Modi and his NDA Govt get sworn in and heads of several countries are in the country, a dastardly terrorist attack on a bus carrying pilgrims has resulted in loss of lives of at least 10 Indians.
We unequivocally condemn this gruesome terror attack…
— Mallikarjun Kharge (@kharge) June 9, 2024
“>
ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಕೂಡ ದಾಳಿಯನ್ನು ಖಂಡಿಸಿದ್ದಾರೆ ಮತ್ತು ಹಿಂದೆ ಎಲ್ಲಾ ಉಗ್ರಗಾಮಿಗಳನ್ನು ತೆರವುಗೊಳಿಸಿದ ಪ್ರದೇಶಗಳು ಉಗ್ರಗಾಮಿತ್ವವನ್ನು ಮರಳಿ ಕಾಣುತ್ತಿರುವುದು ದುರದೃಷ್ಟಕರ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.




