Sunday, October 20, 2024

ಪ್ರಾಯೋಗಿಕ ಆವೃತ್ತಿ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಶುಭ ಕೋರಿದ ಸುಮಲತಾ

ಮಂಡ್ಯ ಕ್ಷೇತ್ರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಹೆಚ್‌ಡಿ ಕುಮಾರಸ್ವಾಮಿ ಅವರು ಮೋದಿ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಬಿಜೆಪಿ ಜೆಡಿಎಸ್ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಟ್ಟಿರುವ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ದೆಹಲಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಶುಭಾಶಯ ತಿಳಿಸಿದ್ದಾರೆ.

ಲೋಕಸಭಾ ಫಲಿತಾಂಶ ಪ್ರಕಟವಾದ ಬಳಿಕ ಸುಮಲತಾ, ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ತಿಳಿಸಿದ್ದರು. ಇದೀಗ ಖುದ್ದು ಭೇಟಿ ಮಾಡಿ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಈ ಮೂಲಕ ರಾಜಕೀಯ ಬದ್ಧ ವೈರಿಗಳು ಈಗ ಮುನಿಸು ಮರೆತು ಒಂದಾಗಿದ್ದರೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರೇ ಸುಮಲತಾ ಅವರ ನಿವಾಸಕ್ಕೆ ಭೇಟಿ ನೀಡಿ ಬೆಂಬಲ ಕೋರಿದ್ದರು. ಆದ್ರೆ, ಸುಮಲತಾ ಮಾತ್ರ ಒಂದೇ ಒಂದು ದಿನ ಹೆಚ್​ಡಿಕೆ ಪರ ಪ್ರಚಾರ ಹೋಗಿಲ್ಲ.

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜನಾಥ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಮಂಡ್ಯ ಜೆಡಿಎಸ್ ನಾಯಕರಾದ ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಶಾಸಕ ಹೆಚ್.ಟಿ.ಮಂಜು ಸೇರಿದಂತೆ ಇತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!