ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದೆ. ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರ ಕೊಲೆ ಆಗಿದೆ, ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಈಗ ಸ್ಯಾಂಡಲ್ ವುಡ್ ನಲ್ಲಿ ತಲ್ಲಣ ಉಂಟು ಮಾಡಿದೆ.
ನಟ ದರ್ಶನ್ ಜೊತೆ ರೂಪದರ್ಶಿ ಪವಿತ್ರಾ ಗೌಡ ಇರುವ ಫೋಟೋಗಳನ್ನು ಇತ್ತೀಚಿಗಷ್ಟೆ ವೈರಲ್ ಆಗಿದ್ದವು. ಇದರ ವಿರುದ್ದ ಸ್ವತಃ ದರ್ಶನ್ ಪತ್ನಿ ಅಸಮಾಧಾನ ವ್ಯಕ್ತಪಡಿಸಿದ್ದರು.
ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು ಎಂಬ ಕಾರಣಕ್ಕೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ.
ನಟ ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.
ಈ ಘಟನೆ ಜೂನ್ 9ರಂದು ನಡೆದಿದ್ದು ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ವಿನಯ್ ಎನ್ನುವವರಿಗೆ ಸೇರಿದ ಶೆಡ್ನಲ್ಲಿ ಅವರನ್ನು ಇರಿಸಲಾಗಿತ್ತು. ಈ ವೇಳೆ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದೆ.
4 ಜನ ಹಲ್ಲೆ ಮಾಡಿದ ತಂಡದಲ್ಲಿ ದರ್ಶನ್ ಕೂಡ ಇದ್ದರು ಎಂಬ ಮಾಹಿತಿ ಇದೆ. ಹತ್ಯೆ ಮಾಡಿ ಮೃತದೇಹವನ್ನು ಮೋರಿಯಲ್ಲಿ ಎಸೆದು ಹೋಗಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಜಯನಗರ ಎಸಿಪಿ ಚಂದನ್ ತಂಡದಿಂದ ನಟ ದರ್ಶನ್ ಬಂಧನವಾಗಿದೆ.
ದರ್ಶನ್ ಅವರ ತಂದೆ ದರ್ಶನ್ ತೂಗುದೀಪ್ ಅವರು ಚಲನಚಿತ್ರಗಳಲ್ಲಿ ಖಳನಾಯಕನ ಪಾತ್ರಗಳಿಗೆ ಪ್ರಸಿದ್ಧರಾಗಿದ್ದರು ಆದರೆ ನಿಜ ಜೀವನದಲ್ಲಿ ಒಳ್ಳೆಯ ವ್ಯಕ್ತಿಯಾಗಿದ್ದರು. ಆದರೆ ಅವರ ಪುತ್ರ ನಟ ದರ್ಶನ್ ಸಿನಿಮಾಗಳಲ್ಲಿ ನಾಯಕ ನಟನಾಗಿ ನಿಜ ಜೀವನದಲ್ಲಿ ವಿಲನ್ ರೀತಿ ನಡೆದುಕೊಳ್ಳುತ್ತಿದ್ದಾರೆಂದು ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿವೆ.




