ಹದಿನೇಳು ವರ್ಷ ವಯಸ್ಸಿನ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯಡಿಯೂರಪ್ಪನವರ ವಿರುದ್ಧ ಪೋಸ್ಕೋ ಪ್ರಕರಣ ದಾಖಲಾಗಿದ್ದು, ಅವರ ಬಂಧನಕ್ಕೆ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ್ದ ಹಿನ್ನಲೆಯಲ್ಲಿ ಅವರು ನಿರೀಕ್ಷಣಾ ಜಾಮೀನು ಕೋರಿ ಹಾಗೂ ಪ್ರಕರಣ ರದ್ದು ಪಡಿಸುವಂತೆ ಆಗ್ರಹಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಾಧೀಶ್ ಕೃಷ್ಣ ಎಸ್.ದೀಕ್ಷಿತ್ ಅವರು ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮುಂಜೂರು ಮಾಡಿ ಆದೇಶ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಜೂನ್ 17ರಂದು ವಿಚಾರಣೆಗೆ ಹಾಜರಾಗುವಂತೆ ಅವರು ಆದೇಶ ನೀಡಿದ್ದಾರೆ. ಮುಂದಿನ ಆದೇಶದವರಿಗೂ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ. ಪೋಸ್ಕೋ ಪ್ರಕರಣದಲ್ಲಿ ಆರೋಪಿ ಯಡಿಯೂರಪ್ಪ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು.




