Thursday, September 19, 2024

ಪ್ರಾಯೋಗಿಕ ಆವೃತ್ತಿ

ಯಾದಗಿರಿ| ಬಿಸಿಯೂಟ ಸೇವಿಸಿದ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಸರ್ಕಾರಿ ಉರ್ದು ಶಾಲೆ, ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಂಬೇಡ್ಕರ್‌ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮಹಾಂತೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಆತಂಕಕಾರಿ ಘಟನೆ ಶುಕ್ರವಾರ ನಡೆದಿದೆ.

ಶಾಲೆಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕಾಗಿ ಅನ್ನ-ಸಾರು ಮಾಡಲಾಗಿತ್ತು. ಆ ಆಹಾರವನ್ನು ಸೇವಿಸಿದ ಬಳಿಕ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವರಿಗೆ ವಾಂತಿಯಾಗಿದ್ದು, ಕೆಲವರಿಗೆ ಹೊಟ್ಟೆ ನೋವು, ತಲೆ ಸುತ್ತು ಕಾಣಿಸಿಕೊಂಡಿದೆ. ಅಸ್ವಸ್ಥ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಗೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು, ಜಿಲ್ಲಾಧಿಕಾರಿ ಡಾ. ಸುಶೀಲಾ, ಜಿಲ್ಲಾ ಪಂಚಾಯತಿ ಸಿಇಒ ಗರೀಮಾ ಪನ್ವಾರ್ ಹಾಗೂ ಎಸ್‌ಪಿ ಸಂಗೀತಾ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿದ್ದು, ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

ಊಟದಲ್ಲಿ ಬಳೆ ಚೂರು: ಮಧ್ಯಾಹ್ನ ಊಟ ಮಾಡುವಾಗ ಕೆಲ ಮಕ್ಕಳ ಊಟದಲ್ಲಿ ಗಾಜಿನ ಬಳೆಗಳ ಚೂರುಗಳು ಬಂದಿವೆ ಎಂದು ಬಿಸಿಯೂಟ ಸೇವಿಸಿದ ಮಕ್ಕಳು ದೂರಿದ್ದಾರೆ. ಶಾಲೆಗಳಿಗೆ ಬಿಸಿಯೂಟ ಪೂರೈಸುತ್ತಿದ್ದ ಏಜೆನ್ಸಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗ್ರಾಮೀಣ ಪ್ರದೇಶದಲ್ಲಿ ಬಡ ಕೂಲಿ ಕಾರ್ಮಿಕರ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಾರೆ. ಗುಣಮಟ್ಟವಲ್ಲದ ಅಡುಗೆ ತಯಾರಿಸಿ ಮಕ್ಕಳ ಜೀವದ ಜೊತೆ ಆಟವಾಡುತ್ತಿರುವ ಖಾಸಗಿ ಏನ್‌ಜಿಒ ವಿರುದ್ದ ಕ್ರಮ ಕೈಗೊಂಡು. ನಮ್ಮ ಮಕ್ಕಳು ಓದುತ್ತಿರುವ ಶಾಲೆಗಳಲ್ಲಿಯೇ ಬಿಸಿಊಟ ತಯಾರಿಸಬೇಕು” ಎಂದು ಪೋಷಕರು ಒತ್ತಾಯಿಸಿದ್ದಾರೆ.

“ಶಾಲೆಗಳಿಗೆ ಬಿಸಿಯೂಟ ಪೂರೈಕಿಸುವ ಏಜೆನ್ಸಿಯು ಜಿಲ್ಲಾ ಸಚಿವ ಶರಣ ಬಸಪ್ಪಗೌಡ ದರ್ಶನಾಪು‌ರ್ ಅವರ ಸಂಬಂಧಿಯದ್ದಾಗಿದ್ದು, ಅಧಿಕಾರಿಗಳು ಕ್ರಮ ಕೈಗೊಳ್ಳುವ ಬಗ್ಗೆ ಅನುಮಾನ ಇದೆ. ಪ್ರಾಮಾಣಿಕ ಅಧಿಕಾರಿಯಿಂದ ತನಿಖೆ ನಡೆಸಬೇಕು” ಎಂದು ಸರ್.ಎಂ.ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಪ್ರದೀಪ್ ಆಗ್ರಹಿಸಿದ್ದಾರೆ.

ಮಕ್ಕಳ ಆಯೋಗ್ಯ ವಿಚಾರಿಸಿ, ಮಾಧ್ಯಮಗಳೊಂದಿಗೆ ಮಾತನಾಡಿದ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು, “ದೇವರ ದಯದಿಂದ ಯಾವುದೇ ರೀತಿಯ ಹೆಚ್ಚಿನ ಅನಾಹುತ ಆಗಿಲ್ಲ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಘಟನೆ ವಿರುದ್ಧ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆ ಬರುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!