Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ

ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಮಂಡ್ಯ ಜಿಲ್ಲಾ ಜೆಡಿಎಸ್ ವಕ್ತಾರ ಎಂ ಎಸ್ ರಘುನಂದನ್ ಆಗ್ರಹಿಸಿದರು.

ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಿಂದಿನ ಸರ್ಕಾರ ರೈತರಿಗೆ ಗುಣಮಟ್ಟದ ಹಾಲು ಸರಬರಾಜು ಮಾಡುವ ಉತ್ಪಾದಕರಿಗೆ ಪ್ರತಿ ಲೀಟರ್ ಗೆ ಐದು ರೂಪಾಯಿ ಪ್ರೋತ್ಸಾಹ ಧನ ನೀಡುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಪ್ರೋತ್ಸಾಹ ಧನ ನೀಡದೇ ರೈತರಿಗೆ ತೊಂದರೆ ನೀಡುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ 600 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ನೀಡಬೇಕಿದ್ದು ಇದರಲ್ಲಿ ಮಂಡ್ಯ ಜಿಲ್ಲೆಗೆ 67 ಕೋಟಿ ರೂಪಾಯಿ ಕೊಡಬೇಕಾಗಿದೆ. ಆದ್ದರಿಂದ ತಕ್ಷಣವೇ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ದಿನವನ್ನು ವಿತರಿಸಬೇಕು ಎಂದು ಆಗ್ರಹ ಪಡಿಸಿದರು.

ಮಂಡ್ಯ ಜಿಲ್ಲೆಯಲ್ಲಿರುವ ಸಹಕಾರ ಇಲಾಖೆ ಅಧಿಕಾರಿಗಳು ಮಂಡ್ಯ ಉಪ ವಿಭಾಗ ಹಾಗೂ ಪಾಂಡವಪುರ ವಿಭಾಗದ ಅಧಿಕಾರಿಗಳು ಸರ್ಕಾರದ ಕೈ ಗೊಂಬೆಯಂತೆ ವರ್ತಿಸುತ್ತಿದ್ದಾರೆ. ಜಾತ್ಯಾತೀತ ಜನತಾದಳ ಮತ್ತು ಭಾರತೀಯ ಜನತಾಪಕ್ಷದ ಆಡಳಿತವಿರುವ ಸಹಕಾರ ಸಂಘಗಳಲ್ಲಿ ಮನಸ್ಸು ಇಚ್ಛೆ ಬಂದ ಹಾಗೆ ನಿರ್ದೇಶಕರನ್ನು ವಜಾ ಮಾಡಲಾಗುತ್ತಿದೆ ಎಂದು ದೂರಿದರು.

ಇದೇ ರೀತಿ ಸಂಘಗಳನ್ನು ನಿರ್ದೇಶಕರನ್ನು ವಜಾ ಮಾಡುತ್ತಿದ್ದರೆ ಮುಂದಿನ ದಿನಗಳಲ್ಲಿ ಸಹಕಾರ ಇಲಾಖೆಯಲ್ಲಿ ಸಹಕಾರ ಸಂಘಗಳ ಇಲ್ಲದಂತಾಗುತ್ತದೆ .ಆದ್ದರಿಂದ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿಯದೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಜೆಡಿಎಸ್ ಮತ್ತು ಬಿಜೆಪಿ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಗೋಷ್ಟಿಯಲ್ಲಿ ರಾಮಚಂದ್ರ , ರೂಪ , ನೆಲ್ಲಿಗೆರೆ ಬಾಲು, ವಸಂತ್ ಕುಮಾರ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ