Friday, November 20, 2026

ಪ್ರಾಯೋಗಿಕ ಆವೃತ್ತಿ

ರೇಣುಕಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್ ಅರೆಸ್ಟ್ ಮಾಡಿದ್ದ ತನಿಖಾಧಿಕಾರಿ ಮರು ನೇಮಕ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.

ಈ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಿನಲ್ಲಿ ಈ ಪ್ರಕರಣದ ತನಿಖೆ ಮಾಡುತ್ತಿದ್ದ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿತ್ತು. ಆದರೆ, ಇದೀಗ ಮತ್ತೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್ ಅವರನ್ನು ತನಿಖಾ ತಂಡಕ್ಕೆ ಮರು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಪ್ರಕರಣದ ತನಿಖೆಯನ್ನು ಕಾಮಾಕ್ಷಿಪಾಳ್ಯದ ಇನ್​​ಸ್ಪೆಕ್ಟರ್​ ಗಿರೀಶ್ ನಾಯ್ಕ್ ಅವರು ನಡೆಸುತ್ತಿದ್ದರು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಗಿರೀಶ್ ನಾಯ್ಕ್ ಅವರು ತನಿಖೆ ನಡೆಸಿ ನಟ ದರ್ಶನ್‌, ಪವಿತ್ರ ಗೌಡ ಸೇರಿದಂತೆ ಒಟ್ಟು 13 ಜನರನ್ನು ಬಂಧಿಸಿದ್ದರು. ಈ ಪ್ರಕರಣವನ್ನು ಸಮರ್ಥವಾಗಿ ನಡೆಸುತ್ತಿದ್ದರು.

ಲೋಕಸಭಾ ಚುನಾವಣೆಯ ಹಿನ್ನೆಲೆ, ಗಿರೀಶ್ ನಾಯ್ಕ್‌ ಅವರನ್ನು ಸಿ.ಕೆ.ಅಚ್ಚುಕಟ್ಟು‌ ಠಾಣೆಯಿಂದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಈ ಮಧ್ಯೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಜವಾಬ್ದಾರಿ ಇವರ ಹೆಗಲಿಗೆ ಬಿದ್ದಿತ್ತು. ಪ್ರಕರಣದ ತನಿಖೆ ನಡೆಸುತ್ತಿದ್ದ ಅವರನ್ನು ಮತ್ತೆ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ತೆರವಾದ ಸ್ಥಾನಕ್ಕೆ ಪ್ರಕರಣದ ನೂತನ ತನಿಖಾಧಿಕಾರಿಯಾಗಿ ವಿಜಯನಗರ ಉಪವಿಭಾಗ ಎಸಿಪಿ ಚಂದನ್ ತನಿಖಾಧಿಕಾರಿಯಾಗಿ ಬಂದಿದ್ದರು.

ಇದೀಗ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಅಗತ್ಯ ಇರುವ ಹಿನ್ನೆಲೆ, ಗಿರೀಶ್ ನಾಯ್ಕ್ ಅವರನ್ನು ಸಹಾಯಕ‌ ತನಿಖಾಧಿಕಾರಿಯನ್ನಾಗಿ ಮತ್ತೆ ನಿಯುಕ್ತಿಗೊಳಿಸಲಾಗಿದೆ. ಆರೋಪಿ ದರ್ಶನ್ ಅವರನ್ನು ಮೈಸೂರಿನಿಂದ ಕರೆತಂದಿದ್ದ ತಂಡದಲ್ಲಿ ಗಿರೀಶ್ ನಾಯ್ಕ್ ಪ್ರಮುಖ ಪಾತ್ರ ವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ