Friday, October 18, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಎಸ್| ನೀರು ಬಿಡುಗಡೆಗೆ ನಾಲಾ ಕಾಮಗಾರಿ ತ್ವರಿತವಾಗಿ ಮುಗಿಸಿ: ಚಲುವರಾಯಸ್ವಾಮಿ

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರ ಅಣೆಕಟ್ಟೆ (ಕೆ‌ಆರ್‌ಎಸ್) ಸಮೀಪದ ಹೋಟೆಲ್ ಮಯೂರದ ಸಭಾಂಗಣದಲ್ಲಿ 300 ಕೋಟಿ ರೂ ವೆಚ್ಚದಲ್ಲಿ ಕೈಗೊಂಡಿರುವ ವಿ.ಸಿ.ಮುಖ್ಯ ನಾಲೆ ಆಧುನೀಕರಣ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ವಿಶ್ವೇಶ್ವರಯ್ಯ ನಾಲೆಯು ಕೃಷ್ಣರಾಜ ಜಲಾಶಯದ ಎಡದಂಡೆಯಿಂದ ಪ್ರಾರಂಭಗೊಳ್ಳುತ್ತದೆ. ಈ ನಾಲೆಯ ಕಾಮಗಾರಿಯು ಸುಮಾರು ,1931 ರಲ್ಲಿ ಪೂರ್ಣಗೊಂಡಿರುತ್ತದೆ. ಇದೀಗ ಆಧುನೀಕರಣ ಕಾಮಗಾರಿ ಕೈಗೊಂಡಿದ್ದು, 40 ಕಿ.ಮೀ ನಲ್ಲಿ 24 ಕಿ.ಮೀ ಪೂರ್ಣಗೊಂಡಿದ್ದು, 4 ಕಿ.ಮೀ ಪ್ರಗತಿಯಲ್ಲಿರುತ್ತದೆ ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.

ಸಚಿವ ಚಲುವರಾಯಸ್ವಾಮಿ ಅವರು, ಕೆ.ಆರ್.ಎಸ್ ನಿಂದ ನೀರು ಬಿಡುಗಡೆ ಮಾಡಲು ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದರು.

ಸಭೆಯಲ್ಲಿ ವಿಧಾನಸಭಾ ಶಾಸಕರಾದ ರಾಮೇಶ್ ಬಾಬು ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣಯ್ಯ, ಪಿ.ರವಿ ಕುಮಾರ್, ವಿಧಾನ ಪರಿಷತ್ ಶಾಸಕ ಮಧು ಮಾದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ: ಕುಮಾರ, ಕಾ.ನೀ.ನಿ.ನಿ ಅಧೀಕ್ಷಕ ಇಂಜಿನಿಯರ್ ರಘುರಾಂ, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!