Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮುಡಾ ಅಧ್ಯಕ್ಷರಾಗಿ ನಯೀಂ ಅಧಿಕಾರ ಸ್ವೀಕಾರ

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನಯೀಂ ಅಧಿಕಾರ ಸ್ವೀಕಾರ ಮಾಡಿದರು. ಇವರೊಂದಿಗೆ ನಾಲ್ವರು ಸದಸ್ಯರಾದ  ಎನ್.ದೊಡ್ಡಯ್ಯ, ಅರುಣ್ ಕುಮಾರ್, ಎಂ.ಕೃಷ್ಣ, ಕಾವ್ಯಶ್ರೀ ಸೋಮಶೇಖರ್ ಅಧಿಕಾರ ಸ್ವೀಕರಿಸಿದರು.

ನೂತನ ಅಧ್ಯಕ್ಷ ನಯೀಂ ಮಾತನಾಡಿ, ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಜಮೀರ್ ಅಹ್ಮದ್, ಶಾಸಕರಾದ ನರೇಂದ್ರಸ್ವಾಮಿ ಹಾಗೂ ರವಿಕುಮಾರ್ ಗಣಿಗ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ.ಇವರೆಲ್ಲರ ಮಾರ್ಗದರ್ಶನದಿಂದ ಮುಡಾದಲ್ಲಿ ಯಾವುದೇ ರೀತಿಯ ಕಪ್ಪು ಚುಕ್ಕೆ ಇಲ್ಲದಂತೆ ಕಾರ್ಯನಿರ್ವಹಿಸುತ್ತೇನೆ. ಮಂಡ್ಯದ ಅಭಿವೃದ್ಧಿಗೆ 25 ಕೋಟಿ ವೆಚ್ಚದ ಯೋಜನೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹಾಗೂ ಶಾಸಕ ಗಣಿಗ ರವಿಕುಮಾರ್ ಅವರು ಚಿಂಚನೆ ಮಾಡಿದ್ದಾರೆ.ಅದನ್ನು ಕಾರ್ಯಗತ ಗೊಳಿಸಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಂಡ್ಯ ಕ್ಷೇತ್ರದ ಶಾಸಕ ಗಣಿಗ ಪಿ.ರವಿಕುಮಾರ್ ಅವರು ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳು ಅಭಿನಂದಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ