Wednesday, October 23, 2024

ಪ್ರಾಯೋಗಿಕ ಆವೃತ್ತಿ

ಭರ್ತೃಹರಿ ಮಹತಾಬ್ ಲೋಕಸಭೆ ಹಂಗಾಮಿ ಸ್ಪೀಕರ್ ಆಗಿ ನೇಮಕ

ಒಡಿಶಾದ ಬಿಜೆಪಿಯ ಪ್ರಮುಖ ನಾಯಕ ಭರ್ತೃಹರಿ ಮಹತಾಬ್ ಅವರು ಸ್ಪೀಕರ್ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ ಎಂದು ಹೇಳಲಾಗಿದ್ದು, ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹಂಗಾಮಿ ಸ್ಪೀಕರ್ ಆಗಿ ನೇಮಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, “ನೂತನ ಸಭಾಧ್ಯಕ್ಷರ ಆಯ್ಕೆಯವರೆಗೆ ಸ್ಪೀಕರ್ ಕರ್ತವ್ಯಗಳನ್ನು ನಿರ್ವಹಿಸಲು ಸಂವಿಧಾನದ 95 (1) ನೇ ವಿಧಿಯ ಅಡಿಯಲ್ಲಿ ಹಂಗಾಮಿ ಸ್ಪೀಕರ್ ಆಗಿ ಲೋಕಸಭೆಯ ಸದಸ್ಯ ಭರ್ತೃಹರಿ ಮಹತಾಬ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಿಸಿದ್ದಾರೆ” ಎಂದು ತಿಳಿಸಿದ್ದಾರೆ.

“>

ಜೊತೆಗೆ, “ಹೊಸದಾಗಿ ಆಯ್ಕೆಯಾದವರಿಗೆ ಪ್ರಮಾಣ ವಚನದ ವೇಳೆ ಹಂಗಾಮಿ ಸ್ಪೀಕರ್ ಅವರಿಗೆ ನೆರವಾಗಲು ಸಂವಿಧಾನದ 99ನೇ ವಿಧಿಯ ಅಡಿಯಲ್ಲಿ ಲೋಕಸಭೆಯ ಸದಸ್ಯರಾದ ಸುರೇಶ್ ಕೋಡಿಕುನ್ನಿಲ್, ತಾಳಿಕ್ಕೋಟ್ಟೈ ರಾಜುತೇವರ್ ಬಾಲು, ರಾಧಾ ಮೋಹನ್ ಸಿಂಗ್, ಫಗ್ಗನ್ ಸಿಂಗ್ ಕುಲಸ್ತೆ ಮತ್ತು ಸುದೀಪ್ ಬಂಡೋಪಾಧ್ಯಾಯ ಅವರನ್ನು ಕೂಡ ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ” ಎಂದು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

ಹಂಗಾಮಿ ಸ್ಪೀಕರ್ ಹುದ್ದೆಗೆ ಲೋಕಸಭೆಯ ಸಂಪ್ರದಾಯದಂತೆ ಸಂಸತ್ತಿನ ಹಿರಿಯ ಸದಸ್ಯರಿಗೆ ನೀಡಲಾಗುತ್ತದೆ. ಸ್ಪೀಕರ್ ಹುದ್ದೆಗೆ ಸೂಕ್ತ ಅಭ್ಯರ್ಥಿಯ ಆಯ್ಕೆಯಾಗುವುದಕ್ಕೂ ಮುನ್ನ ಹಂಗಾಮಿ ಸ್ಪೀಕರ್ ಅವರು ಪ್ರಧಾನ ಮಂತ್ರಿಗಳ ಮಂತ್ರಿ, ಮಂತ್ರಿಗಳು ಮತ್ತು ಎಲ್ಲ ಸಂಸದರಿಗೆ ಪ್ರಮಾಣ ವಚನ ಬೋಧಿಸುವ ಕರ್ತವ್ಯ ನಿರ್ವಹಿಸಲಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!